18-01-2024

3 ಮಾದರಿಯ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಬ್ಯಾಟರ್​ಗಳ ಪಟ್ಟಿ ಇಲ್ಲಿದೆ.

Author: ಪೃಥ್ವಿ ಶಂಕರ

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. 664 ಪಂದ್ಯಗಳನ್ನು ಆಡಿದ ಕ್ರಿಕೆಟ್​ ದೇವರು ದಾಖಲೆಯ 100 ಶತಕಗಳನ್ನು ದಾಖಲಿಸಿದ್ದಾರೆ.

ಎರಡನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ ಆಡಿರುವ 522 ಪಂದ್ಯಗಳಲ್ಲಿ ಇಲ್ಲಿಯವರೆಗೆ 80 ಶತಕಗಳನ್ನು ಸಿಡಿಸಿದ್ದಾರೆ.

560 ಪಂದ್ಯಗಳನ್ನು ಆಡಿರುವ ರಿಕಿ ಪಾಂಟಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 71 ಶತಕಗಳನ್ನು ಬಾರಿಸಿದ್ದಾರೆ.

ಶ್ರೀಲಂಕಾದ ಕುಮಾರ ಸಂಗಕ್ಕಾರ 594 ಅಂತಾರಾಷ್ಟ್ರೀಯ ಪಂದ್ಯಗಳಿಂದ ಒಟ್ಟು 63 ಶತಕಗಳನ್ನು ಸಿಡಿಸಿದ್ದಾರೆ.

ದಕ್ಷಿಣ ಆಫ್ರಿಕಾದ ಜಾಕ್ವೆಸ್ ಕಾಲಿಸ್ 519 ಪಂದ್ಯಗಳಿಂದ ಒಟ್ಟು 62 ಶತಕಗಳನ್ನು ಗಳಿಸಿದ್ದಾರೆ.

ದಕ್ಷಿಣ ಆಫ್ರಿಕಾದ ಹಾಶಿಮ್ ಆಮ್ಲಾ 349 ಅಂತರಾಷ್ಟ್ರೀಯ ಪಂದ್ಯಗಳಿಂದ ಒಟ್ಟು 55 ಶತಕಗಳನ್ನು ಸಿಡಿಸಿದ್ದಾರೆ.

ಶ್ರೀಲಂಕಾದ ಮಹೇಲ ಜಯವರ್ಧನೆ 652 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಒಟ್ಟು 54 ಶತಕಗಳನ್ನು ಬಾರಿಸಿದ್ದಾರೆ.

ವೆಸ್ಟ್ ಇಂಡೀಸ್​ನ ಬ್ರಿಯಾನ್ ಲಾರಾ 430 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 53 ಶತಕಗಳನ್ನು ಸಿಡಿಸಿದ್ದಾರೆ.

ಭಾರತದ ರಾಹುಲ್ ದ್ರಾವಿಡ್ 509 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು ಒಟ್ಟು 48 ಶತಕಗಳನ್ನು ಬಾರಿಸಿದ್ದಾರೆ.

ಎಬಿ ಡಿವಿಲಿಯರ್ಸ್ 420 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ತಮ್ಮ ವೃತ್ತಿಜೀವನದಲ್ಲಿ ಒಟ್ಟು 47 ಶತಕಗಳನ್ನು ಗಳಿಸಿದ್ದಾರೆ.

338 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಜೋ ರೂಟ್ ಅವರ ಹೆಸರಿನಲ್ಲಿ 46 ಶತಕಗಳು ದಾಖಲಾಗಿವೆ.

ರೋಹಿತ್ ಶರ್ಮಾ ಇದುವರೆಗೆ 467 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, 46 ಶತಕಗಳನ್ನು ಬಾರಿಸಿದ್ದಾರೆ. ಈ ಪಟ್ಟಿಯಲ್ಲಿ ಅವರು 12 ನೇ ಸ್ಥಾನದಲ್ಲಿದ್ದಾರೆ.

NEXT: ಏಕದಿನ ಪಂದ್ಯವೊಂದರಲ್ಲಿ ಅಧಿಕ ಬೌಂಡರಿ ಬಾರಿಸಿದ ಬ್ಯಾಟರ್ ಯಾರು ಗೊತ್ತಾ?