26-01-2024

ಅತಿ ಹೆಚ್ಚು ಐಸಿಸಿ ಪ್ರಶಸ್ತಿಗಳನ್ನು ಗೆದ್ದ ಆಟಗಾರರಲ್ಲಿ ಕಿಂಗ್ ಕೊಹ್ಲಿ ನಂ.1

Author: ಪೃಥ್ವಿ ಶಂಕರ

ಅತಿ ಹೆಚ್ಚು ಐಸಿಸಿ ಪ್ರಶಸ್ತಿಗಳನ್ನು ಗೆದ್ದ ಆಟಗಾರರ ಪಟ್ಟಿಯಲ್ಲಿ ಭಾರತದ ವಿರಾಟ್ ಕೊಹ್ಲಿ ಅತ್ಯಧಿಕ 10 ಐಸಿಸಿ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ಕೊಹ್ಲಿ ನಂತರದ ಎರಡನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ 04 ಐಸಿಸಿ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ಶ್ರೀಲಂಕಾದ ಮಾಜಿ ನಾಯಕ ಕುಮಾರ ಸಂಗಕ್ಕಾರ 04 ಐಸಿಸಿ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ 03 ಐಸಿಸಿ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ಎರಡೆರಡು ಏಕದಿನ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ 03 ಐಸಿಸಿ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ 03 ಐಸಿಸಿ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಮಿಚೆಲ್ ಜಾನ್ಸನ್ 03 ಐಸಿಸಿ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ 03 ಐಸಿಸಿ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.