01-12-2023

2024ರ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದ ಎಲ್ಲಾ 20 ತಂಡಗಳ ಪಟ್ಟಿ ಇಲ್ಲಿದೆ

Author: ಪೃಥ್ವಿ ಶಂಕರ

ಆತಿಥೇಯ ರಾಷ್ಟ್ರಗಳಾಗಿರುವ ಅಮೆರಿಕ ಹಾಗೂ ವೆಸ್ಟ್ ಇಂಡೀಸ್ 2024ರ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆದಿವೆ.

ಕಳೆದ ಟಿ20 ವಿಶ್ವಕಪ್‌ನಲ್ಲಿ ಟಾಪ್-8ರಲ್ಲಿ ಸ್ಥಾನ ಪಡೆದಿದ್ದ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡ ಕೂಡ 2024ರ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆದಿವೆ.

ಕಳೆದ ಟಿ20 ವಿಶ್ವಕಪ್‌ನಲ್ಲಿ ಟಾಪ್-8ರಲ್ಲಿ ಸ್ಥಾನ ಪಡೆದಿದ್ದ ಭಾರತ ಹಾಗೂ ನೆದರ್ಲೆಂಡ್ಸ್ ತಂಡ 2024ರ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆದಿವೆ.

ಕಳೆದ ಟಿ20 ವಿಶ್ವಕಪ್‌ನಲ್ಲಿ ಟಾಪ್-8ರಲ್ಲಿ ಸ್ಥಾನ ಪಡೆದಿದ್ದ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ತಂಡ ಈ ಬಾರಿಯ 2024ರ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆದಿವೆ.

ಕಳೆದ ಟಿ20 ವಿಶ್ವಕಪ್‌ನಲ್ಲಿ ಟಾಪ್-8ರಲ್ಲಿ ಸ್ಥಾನ ಪಡೆದಿದ್ದ ದಕ್ಷಿಣ ಆಫ್ರಿಕಾ ಹಾಗೂ ಶ್ರೀಲಂಕಾ ತಂಡ ಕೂಡ 2024ರ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆದಿವೆ.

ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ತಮ್ಮ ಶ್ರೇಯಾಂಕದ ಆಧಾರದ ಮೇಲೆ 2024 ರ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆದಿವೆ.

ಯುರೋಪ್ ಕ್ವಾಲಿಫೈಯರ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಐರ್ಲೆಂಡ್ ಹಾಗೂ ಸ್ಕಾಟ್ಲೆಂಡ್ 2024 ರ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆದಿವೆ.

ಪೂರ್ವ ಏಷ್ಯಾ ಪೆಸಿಫಿಕ್ ಅರ್ಹತಾ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಪಪುವಾ ನ್ಯೂಗಿನಿ ತಂಡ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದೆ.

ಕೆನಡಾ ಕೂಡ ಅಮೆರಿಕದ ಕ್ವಾಲಿಫೈಯರ್ ಪಂದ್ಯವನ್ನು ಆಡುವ ಮೂಲಕ 2024 ರ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆದಿದೆ.

ನೇಪಾಳ ಹಾಗೂ ಒಮಾನ್ ತಂಡ ಏಷ್ಯಾ ಕ್ವಾಲಿಫೈಯರ್ ಆಡುವ ಮೂಲಕ 2024 ರ ಟಿ20 ವಿಶ್ವಕಪ್‌ಗೆ ಪ್ರವೇಶ ಪಡೆದಿವೆ.

ಆಫ್ರಿಕಾ ರೀಜನ್ ಕ್ವಾಲಿಫೈಯರ್ ಆಡುವ ಮೂಲಕ ನಮೀಬಿಯಾ ಹಾಗೂ ಉಗಾಂಡ ತಂಡ 2024ರ ಟಿ20 ವಿಶ್ವಕಪ್‌ಗೆ ಪ್ರವೇಶ ಪಡೆದಿವೆ.

list of all 20 teams that have qualified for t20 world cup 2024