18-03-2024

IPL: ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಿದವರು

Author: ಪೃಥ್ವಿ ಶಂಕರ

ಈ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ಬ್ಯಾಟರ್ ಯಶಸ್ವಿ ಜೈಸ್ವಾಲ್ ಮೊದಲ ಸ್ಥಾನದಲ್ಲಿದ್ದಾರೆ. ಈ ಎಡಗೈ ಬ್ಯಾಟರ್ ಇದುವರೆಗೆ ಎರಡು ಬಾರಿ ಈ ಸಾಧನೆ ಮಾಡಿದ್ದಾರೆ.

ಎರಡನೇ ಸ್ಥಾನದಲ್ಲಿರುವ ಕನ್ನಡಿಗ ಮಯಾಂಕ್ ಅಗರ್ವಾಲ್ ಐಪಿಎಲ್ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸಿದ ದಾಖಲೆಯನ್ನು ಒಮ್ಮೆ ಮಾಡಿದ್ದಾರೆ.

ಆರ್‌ಸಿಬಿಯ ವಿರಾಟ್ ಕೊಹ್ಲಿ ಕೂಡ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೆಕೆಆರ್ ತಂಡದ ಸುನಿಲ್ ನರೈನ್ ಕೂಡ ಮೊದಲ ಎಸೆತದಲ್ಲಿ ಸಿಕ್ಸರ್ ಸಿಡಿಸಿದ ಸಾಧನೆಯನ್ನು ಒಮ್ಮೆ ಮಾಡಿದ್ದಾರೆ

ನಮನ್ ಓಜಾ ಕೂಡ ಒಮ್ಮೆ ಐಪಿಎಲ್‌ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸಿದ್ದರು.

ಕನ್ನಡಿಗ ರಾಬಿನ್ ಉತ್ತಪ್ಪ ಒಮ್ಮೆ ಐಪಿಎಲ್ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸಿದ್ದರು.