13-06-2024

ಅತಿ ಹೆಚ್ಚು ಟಿ20 ಪಂದ್ಯಗಳನ್ನು ಆಡಿದ ಆಟಗಾರ ಯಾರು ಗೊತ್ತಾ?

ಅತಿ ಹೆಚ್ಚು ಟಿ20 ಪಂದ್ಯಗಳನ್ನು ಆಡಿದ ಆಟಗಾರರ ಪಟ್ಟಿಯಲ್ಲಿ ಇದುವರೆಗೆ 660 ಪಂದ್ಯಗಳನ್ನು ಆಡಿರುವ ವೆಸ್ಟ್​ ಇಂಡೀಸ್​ನ ಕೀರಾನ್ ಪೊಲಾರ್ಡ್ ಮೊದಲ ಸ್ಥಾನದಲ್ಲಿದ್ದಾರೆ.

ಇದುವರೆಗೆ 573 ಪಂದ್ಯಗಳನ್ನು ಆಡಿರುವ  ವೆಸ್ಟ್​ ಇಂಡೀಸ್​ನ ಮತ್ತೊಬ್ಬ ಆಲ್‌ರೌಂಡರ್ ಡ್ವೇನ್ ಬ್ರಾವೋ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

ಮೂರನೇ ಸ್ಥಾನದಲ್ಲಿರುವ ಪಾಕ್​ ತಂಡದ ಮಾಜಿ ನಾಯಕ ಶೋಯೆಬ್ ಮಲಿಕ್ ಟಿ20 ಕ್ರಿಕೆಟ್‌ನಲ್ಲಿ ಇದುವರೆಗೆ 542 ಪಂದ್ಯಗಳನ್ನು ಆಡಿದ್ದಾರೆ.

ವೆಸ್ಟ್ ಇಂಡೀಸ್​​ನ ಸ್ಟಾರ್ ಆಲ್ ಸುನಿಲ್ ನರೈನ್ ಇದುವರೆಗೆ 513 ಟಿ20 ಪಂದ್ಯಗಳನ್ನು ಆಡಿದ್ದಾರೆ.

ಆಂಡ್ರೆ ರಸೆಲ್ ಈಗ ಟಿ20 ಕ್ರಿಕೆಟ್‌ನಲ್ಲಿ 500 ಪಂದ್ಯಗಳನ್ನು ಆಡಿದ ದಾಖಲೆ ನಿರ್ಮಿಸಿದ್ದಾರೆ.

ದಕ್ಷಿಣ ಆಫ್ರಿಕಾದ ಅನುಭವಿ ಬ್ಯಾಟರ್ ಡೇವಿಡ್ ಮಿಲ್ಲರ್ ಇದುವರೆಗೆ ಟಿ20 ಕ್ರಿಕೆಟ್​ನಲ್ಲಿ ಒಟ್ಟು 481 ಪಂದ್ಯಗಳನ್ನು ಆಡಿದ್ದಾರೆ.

ಇಂಗ್ಲೆಂಡ್​ನ ಮಾಜಿ ಆಟಗಾರ ರವಿ ಬೋಪಾರ ಇದುವರೆಗೆ ಟಿ20 ಕ್ರಿಕೆಟ್‌ನಲ್ಲಿ 466 ಪಂದ್ಯಗಳನ್ನು ಆಡಿದ್ದಾರೆ.

ವೆಸ್ಟ್​ ಇಂಡೀಸ್​ನ ಸ್ಫೋಟಕ ಬ್ಯಾಟರ್ ಕ್ರಿಸ್ ಗೇಲ್ ವಿಶ್ವದಾದ್ಯಂತ 463 ಟಿ20 ಪಂದ್ಯಗಳನ್ನು ಆಡುವಲ್ಲಿ ಯಶಸ್ವಿಯಾಗಿದ್ದಾರೆ.

ಇಂಗ್ಲೆಂಡ್​ನ ಮಾಜಿ ಆರಂಭಿಕ ಅಲೆಕ್ಸ್ ಹೇಲ್ಸ್ ಇಲ್ಲಿಯವರೆಗೆ ಟಿ20 ಕ್ರಿಕೆಟ್‌ನಲ್ಲಿ 454 ಪಂದ್ಯಗಳನ್ನು ಆಡಿದ್ದಾರೆ.

ಭಾರತದ ನಾಯಕ ರೋಹಿತ್ ಶರ್ಮಾ ಟಿ20 ಕ್ರಿಕೆಟ್‌ನಲ್ಲಿ ಇದುವರೆಗೆ 443 ಪಂದ್ಯಗಳನ್ನು ಆಡಿದ್ದಾರೆ.