22-06-2024

ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟ್ಸ್‌ಮನ್ ಯಾರು ಗೊತ್ತಾ?

Author: ಪೃಥ್ವಿ ಶಂಕರ

ಕ್ರಿಸ್ ಗೇಲ್ ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದದ್ದಾರೆ. ಗೇಲ್ ಆಡಿದ 33 ಪಂದ್ಯಗಳಲ್ಲಿ 63 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಎರಡನೇ ಸ್ಥಾನದಲ್ಲಿದ್ದು, ಅವರು 39 ಪಂದ್ಯಗಳಲ್ಲಿ 40 ಸಿಕ್ಸರ್‌ಗಳನ್ನು ಹೊಂದಿದ್ದಾರೆ.

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮೂರನೇ ಸ್ಥಾನದಲ್ಲಿದ್ದು, 43 ಪಂದ್ಯಗಳಲ್ಲಿ 39 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ನಾಲ್ಕನೇ ಬ್ಯಾಟ್ಸ್‌ಮನ್ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್. ಅವರು ಆಡಿರುವ 32 ಪಂದ್ಯಗಳಲ್ಲಿ 36 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಮಾಜಿ ಆಟಗಾರ ಯುವರಾಜ್ ಸಿಂಗ್ 31 ಪಂದ್ಯಗಳಲ್ಲಿ 33 ಸಿಕ್ಸರ್ ಬಾರಿಸಿದ್ದರು.

ಆಸ್ಟ್ರೇಲಿಯಾದ ಮಾಜಿ ಆಟಗಾರ ಶೇನ್ ವ್ಯಾಟ್ಸನ್ ಟಿ20 ವಿಶ್ವಕಪ್‌ನಲ್ಲಿ ಆಡಿದ 24 ಪಂದ್ಯಗಳಲ್ಲಿ 31 ಸಿಕ್ಸರ್ ಬಾರಿಸಿದ್ದರು.

ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಟಿ20 ವಿಶ್ವಕಪ್‌ನಲ್ಲಿ 30 ಪಂದ್ಯಗಳಲ್ಲಿ 30 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ.

ವಿರಾಟ್ ಕೊಹ್ಲಿ ಇದುವರೆಗೆ ಟಿ20 ವಿಶ್ವಕಪ್‌ನಲ್ಲಿ 31 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು 29 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್‌ವೆಲ್ ಟಿ20 ವಿಶ್ವಕಪ್‌ನಲ್ಲಿ 29 ಪಂದ್ಯಗಳಲ್ಲಿ 26 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

NEXT: ಟಿ20 ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್ ಪಡೆದ ಬೌಲರ್ಗಳು ಯಾರ್ಯಾರು ಗೊತ್ತಾ?