19-06-2024

ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ಬೌಂಡರಿ ಬಾರಿಸಿರುವ ಬ್ಯಾಟರ್ಸ್​ಗಳಿವರು

Author: ಪೃಥ್ವಿ ಶಂಕರ

ಟಿ20 ವಿಶ್ವಕಪ್ 2024 ರ ಗುಂಪು ಹಂತವು ಕೊನೆಗೊಂಡಿದೆ. ಜೂನ್ 19 ರಿಂದ ಸೂಪರ್-8 ಪಂದ್ಯಗಳು ನಡೆಯಲಿವೆ.

ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಸೂಪರ್-8 ರಲ್ಲಿ ಜೂನ್ 20 ರಂದು ಅಫ್ಘಾನಿಸ್ತಾನ ವಿರುದ್ಧ ಆಡಲಿದೆ.

ಏತನ್ಮಧ್ಯೆ, ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ಬೌಂಡರಿ ಬಾರಿಸಿದ ಬ್ಯಾಟ್ಸ್‌ಮನ್‌ಗಳ ಬಗ್ಗೆ ನಾವು ನಿಮಗೆ ಹೇಳಲಿದ್ದೇವೆ.

ಈ ಪಟ್ಟಿಯಲ್ಲಿ ಮೊದಲ ಹೆಸರು ಕ್ರಿಸ್ ಗೇಲ್ ಅವರು 141 ಬೌಂಡರಿಗಳನ್ನು ಬಾರಿಸಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಮಹೇಲಾ ಜಯವರ್ಧನೆ 136 ಬೌಂಡರಿಗಳನ್ನು ಬಾರಿಸಿ ಎರಡನೇ ಸ್ಥಾನದಲ್ಲಿದ್ದಾರೆ.

ಮೂರನೇ ಸ್ಥಾನದಲ್ಲಿರುವ ರೋಹಿತ್ ಶರ್ಮಾ ಟಿ20 ವಿಶ್ವಕಪ್‌ನಲ್ಲಿ 135 ಬೌಂಡರಿಗಳನ್ನು ಬಾರಿಸಿದ್ದಾರೆ.

ಡೇವಿಡ್ ವಾರ್ನರ್ ಟಿ20 ವಿಶ್ವಕಪ್‌ನಲ್ಲಿ 134 ಬೌಂಡರಿಗಳನ್ನು ಬಾರಿಸಿ 4ನೇ ಸ್ಥಾನದಲ್ಲಿದ್ದಾರೆ.

ವಿರಾಟ್ ಕೊಹ್ಲಿ ಟಿ20 ವಿಶ್ವಕಪ್‌ನಲ್ಲಿ 132 ಬೌಂಡರಿಗಳನ್ನು ಸಿಡಿಸಿ ಐದನೇ ಸ್ಥಾನದಲ್ಲಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ತಿಲಕರತ್ನೆ ದಿಲ್ಶಾನ್ 121 ಬೌಂಡರಿಗಳನ್ನು ಬಾರಿಸಿ 6ನೇ ಸ್ಥಾನದಲ್ಲಿದ್ದಾರೆ.

ಜೋಸ್ ಬಟ್ಲರ್ ಟಿ20 ವಿಶ್ವಕಪ್‌ನಲ್ಲಿ 114 ಬೌಂಡರಿಗಳನ್ನು ಬಾರಿಸಿ 7ನೇ ಸ್ಥಾನದಲ್ಲಿದ್ದಾರೆ.