08-06-2024

ಟಿ20 ವಿಶ್ವಕಪ್‌ನಲ್ಲಿ ಹೀನಾಯ ಸೋಲು ಕಂಡ ತಂಡ ಯಾವುದು ಗೊತ್ತಾ?

Author: ಪೃಥ್ವಿ ಶಂಕರ

2007ರ ಟಿ20 ವಿಶ್ವಕಪ್‌ನಲ್ಲಿ ಕೀನ್ಯಾ ತಂಡ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 172 ರನ್‌ಗಳಿಂದ ಸೋತಿತ್ತು. ಇದು ಈವರೆಗಿನ ದಾಖಲೆಯಾಗಿದೆ.

2009ರ ಟಿ20 ವಿಶ್ವಕಪ್‌ನಲ್ಲಿ ಸ್ಕಾಟ್ಲೆಂಡ್ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 130 ರನ್‌ಗಳಿಂದ ಸೋತಿತ್ತು.

ಅಫ್ಘಾನಿಸ್ತಾನ ವಿರುದ್ಧ 2021ರ ಟಿ20 ವಿಶ್ವಕಪ್‌ನಲ್ಲಿ ಸ್ಕಾಟ್ಲೆಂಡ್ ತಂಡ 130 ರನ್‌ಗಳಿಂದ ಸೋತಿತ್ತು.

ಇದೀಗ 2024ರ ಟಿ20 ವಿಶ್ವಕಪ್‌ನಲ್ಲಿ ಉಗಾಂಡ, ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ 125 ರನ್‌ಗಳಿಂದ ಸೋತಿದೆ.

2012ರ ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅಫ್ಘಾನಿಸ್ತಾನ 116 ರನ್‌ಗಳಿಂದ ಸೋತಿತ್ತು.

ಬಾಂಗ್ಲಾದೇಶ ತಂಡ 2022ರ ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 104 ರನ್‌ಗಳಿಂದ ಸೋತಿತ್ತು.

2012ರ ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ತಂಡ, ಭಾರತದ ವಿರುದ್ಧ 90 ರನ್‌ಗಳಿಂದ ಸೋತಿತ್ತು.

ಆಸ್ಟ್ರೇಲಿಯ ತಂಡ 2022ರ ಟಿ20 ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ 89 ರನ್‌ಗಳ ಸೋಲನ್ನು ಎದುರಿಸಬೇಕಾಯಿತು.

ಇದೀಗ 2024ರ ಟಿ20 ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ತಂಡ ಅಫ್ಘಾನಿಸ್ತಾನ ವಿರುದ್ಧ 84 ರನ್‌ಗಳಿಂದ ಸೋತಿದೆ.