16-03-2024

ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಡಾಟ್ ಬಾಲ್‌ ಬೌಲ್ ಮಾಡಿದ ಬೌಲರ್​ಗಳಿವರು

Author: ಪೃಥ್ವಿ ಶಂಕರ

ಐಪಿಎಲ್‌ನಲ್ಲಿ ಅತಿ ಹೆಚ್ಚು ಡಾಟ್ ಬಾಲ್ ಎಸೆದ ದಾಖಲೆ ವೇಗಿ ಭುವನೇಶ್ವರ್ ಕುಮಾರ್ ಹೆಸರಿನಲ್ಲಿದೆ. ಅವರು ಐಪಿಎಲ್‌ನಲ್ಲಿ 1593 ಡಾಟ್ ಬಾಲ್‌ಗಳನ್ನು ಎಸೆದಿದ್ದಾರೆ.

ಎರಡನೇ ಎಸೆತದಲ್ಲಿರುವ ರಾಜಸ್ಥಾನ್ ರಾಯಲ್ಸ್ ಬೌಲರ್ ರವಿಚಂದ್ರನ್ ಅಶ್ವಿನ್ ಐಪಿಎಲ್​ನಲ್ಲಿ 1517 ಡಾಟ್ ಬಾಲ್ ಎಸೆದಿದ್ದಾರೆ.

ಕೆಕೆಆರ್ ಆಲ್​ರೌಂಡರ್ ಸುನಿಲ್ ನರೈನ್ ಐಪಿಎಲ್‌ನಲ್ಲಿ 1504 ಡಾಟ್ ಬಾಲ್‌ಗಳನ್ನು ಎಸೆದಿದ್ದಾರೆ.

ಮಾಜಿ ಮುಂಬೈ ಇಂಡಿಯನ್ಸ್ ಆಟಗಾರ ಹರ್ಭಜನ್ ಸಿಂಗ್ ಐಪಿಎಲ್‌ನಲ್ಲಿ 1312 ಡಾಟ್ ಬಾಲ್‌ಗಳನ್ನು ಎಸೆದಿದ್ದಾರೆ.

ಮಾಜಿ ಮುಂಬೈ ಇಂಡಿಯನ್ಸ್ ಬೌಲರ್ ಲಸಿತ್ ಮಾಲಿಂಗ ಐಪಿಎಲ್‌ನಲ್ಲಿ 1217 ಡಾಟ್ ಬಾಲ್‌ಗಳನ್ನು ಎಸೆದಿದ್ದಾರೆ.

ಮಾಜಿ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ಅಮಿತ್ ಮಿಶ್ರಾ ಐಪಿಎಲ್‌ನಲ್ಲಿ 1215 ಡಾಟ್ ಬಾಲ್‌ಗಳನ್ನು ಎಸೆದಿದ್ದಾರೆ.

ಕೆಕೆಆರ್ ಬೌಲರ್ ಉಮೇಶ್ ಯಾದವ್ ಐಪಿಎಲ್‌ನಲ್ಲಿ 1204 ಡಾಟ್ ಬಾಲ್‌ಗಳನ್ನು ಎಸೆದಿದ್ದಾರೆ.

ಪ್ರಸ್ತುತ ಸಿಎಸ್​ಕೆ ಪರ ಆಡುತ್ತಿರುವ ಆಲ್​ರೌಂಡರ್ ರವೀಂದ್ರ ಜಡೇಜಾ ಐಪಿಎಲ್‌ನಲ್ಲಿ 1186 ಡಾಟ್ ಬಾಲ್‌ಗಳನ್ನು ಎಸೆದಿದ್ದಾರೆ.