19-04-2024

ಈ ಐಪಿಎಲ್‌ನಲ್ಲಿ ವೇಗದ ಅರ್ಧಶತಕ ಸಿಡಿಸಿದ್ಯಾರು ಗೊತ್ತಾ?

Author: ಪೃಥ್ವಿ ಶಂಕರ

ಈ ಐಪಿಎಲ್‌ನಲ್ಲಿ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಸನ್‌ರೈಸರ್ಸ್ ಹೈದರಾಬಾದ್​ನ  ಅಭಿಷೇಕ್ ಶರ್ಮಾ ಹೆಸರಿನಲ್ಲಿದೆ. ಅಭಿಷೇಕ್ ಮುಂಬೈ ಇಂಡಿಯನ್ಸ್ ವಿರುದ್ಧ ಕೇವಲ 16 ಎಸೆತಗಳಲ್ಲಿ 50 ರನ್ ಸಿಡಿಸಿದ್ದರು.

ಎರಡನೇ ಸ್ಥಾನದಲ್ಲಿರುವ ಸೂರ್ಯಕುಮಾರ್ ಯಾದವ್ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಕೇವಲ 17 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದರು.

ಮುಂಬೈ ಇಂಡಿಯನ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡದ ಟ್ರಾವಿಸ್ ಹೆಡ್ 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದು, ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ನ ಟ್ರಿಸ್ಟಾನ್ ಸ್ಟಬ್ಸ್ 19 ಎಸೆತಗಳಲ್ಲಿ 50 ರನ್ ಪೂರೈಸಿದ್ದರು.

ಸನ್‌ರೈಸರ್ಸ್ ಹೈದರಾಬಾದ್​ನ ಟ್ರಾವಿಸ್ ಹೆಡ್ ಕೂಡ ಆರ್​ಸಿಬಿ ವಿರುದ್ಧ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು.

ಕೆಕೆಆರ್‌ನ ಆಂಡ್ರೆ ರಸೆಲ್ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 20 ಎಸೆತಗಳಲ್ಲಿ ಅರ್ಧಶತಕ ದಾಖಲಿಸಿದ್ದರು.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಸುನಿಲ್ ನರೈನ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು.

ಸಿಎಸ್​ಕೆ ಬ್ಯಾಟರ್ ಶಿವಂ ದುಬೆ ಗುಜರಾತ್ ಟೈಟಾನ್ಸ್ ವಿರುದ್ಧ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು.

ಮುಂಬೈ ಇಂಡಿಯನ್ಸ್ ವಿರುದ್ಧ ಆರ್‌ಸಿಬಿಯ ದಿನೇಶ್ ಕಾರ್ತಿಕ್ 22 ಎಸೆತಗಳಲ್ಲಿ ಅರ್ಧಶತಕ ದಾಖಲಿಸಿ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

NEXT: IPL 2024: ಕೇವಲ 16 ರನ್ ಬಾರಿಸಿದ ಪಂತ್ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಿದ್ಯಾಕೆ?