08-06-2024

ಪಾಕ್ ವಿರುದ್ಧ ಟಿ20 ವಿಶ್ವಕಪ್‌ನಲ್ಲಿ ಅರ್ಧಶತಕ ಬಾರಿಸಿರುವ ಭಾರತದ ಬ್ಯಾಟರ್ಸ್​ಗಳಿವರು

Author: ಪೃಥ್ವಿ ಶಂಕರ

2007ರಲ್ಲಿ ನಡೆದ ಚೊಚ್ಚಲ ಟಿ20 ವಿಶ್ವಕಪ್‌ನಲ್ಲಿ ಕನ್ನಡಿಗ ರಾಬಿನ್ ಉತ್ತಪ್ಪ ಪಾಕಿಸ್ತಾನ ವಿರುದ್ಧ 50 ರನ್ ಬಾರಿಸಿದ್ದರು.

ಇನ್ನು ಅದೇ ಆವೃತ್ತಿಯಲ್ಲಿ ಅಂದರೆ 2007 ರ ಟಿ20 ವಿಶ್ವಕಪ್‌ನ ಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಗೌತಮ್ ಗಂಭೀರ್ 75 ರನ್‌ಗಳ ಇನ್ನಿಂಗ್ಸ್ ಆಡಿದ್ದರು.

ಆ ಬಳಿಕ 2012 ರ ಟಿ20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಪಾಕಿಸ್ತಾನ ವಿರುದ್ಧ 78 ರನ್‌ಗಳ ಇನ್ನಿಂಗ್ಸ್ ಆಡಿದ್ದರು.

2016 ರಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲೂ ಪಾಕಿಸ್ತಾನ ವಿರುದ್ಧ ವಿರಾಟ್ ಕೊಹ್ಲಿ 55 ರನ್‌ಗಳ ಇನ್ನಿಂಗ್ಸ್ ಆಡಿದ್ದರು.

2021 ರ ಟಿ20 ವಿಶ್ವಕಪ್‌ನಲ್ಲೂ ವಿರಾಟ್ ಕೊಹ್ಲಿ ಪಾಕಿಸ್ತಾನ ವಿರುದ್ಧ 57 ರನ್‌ಗಳ ಇನ್ನಿಂಗ್ಸ್ ಆಡಿದ್ದರು.

2022 ರ ಟಿ20 ವಿಶ್ವಕಪ್‌ನಲ್ಲೂ ವಿರಾಟ್ ಕೊಹ್ಲಿ ಬ್ಯಾಟ್​ನಿಂದ ಪಾಕಿಸ್ತಾನ ವಿರುದ್ಧ 82 ರನ್‌ ಸಿಡಿದಿತ್ತು.

ಕೊಹ್ಲಿಯ ಈ ಸಿಡಿಲಬ್ಬರದ ಬ್ಯಾಟಿಂಗ್​ನಿಂದಾಗಿ ಭಾರತ ತಂಡ ಪಾಕಿಸ್ತಾನದ ವಿರುದ್ಧ 4 ವಿಕೆಟ್‌ಗಳಿಂದ ಪಂದ್ಯ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.

ಹೀಗಾಗಿ ನಾಳಿನ ಪಂದ್ಯದಲ್ಲೂ ಪಾಕಿಸ್ತಾನದ ವಿರುದ್ಧ ವಿರಾಟ್ ಕೊಹ್ಲಿ ಬ್ಯಾಟ್​ನಿಂದ ಅರ್ಧಶತಕದ ಇನ್ನಿಂಗ್ಸ್ ಸಿಡಿಯಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.