07-03-2024

ಭಾರತದ ಪರ 100 ಟೆಸ್ಟ್, ಏಕದಿನ ಪಂದ್ಯಗಳನ್ನಾಡಿದ ಕ್ರಿಕೆಟಿಗರಿವರು

Author: ಪೃಥ್ವಿ ಶಂಕರ

ಭಾರತದ ಪರ 100 ಟೆಸ್ಟ್ ಪಂದ್ಯಗಳನ್ನು ಆಡಿದ ಮೊದಲ ಆಟಗಾರ ಸುನಿಲ್ ಗವಾಸ್ಕರ್. ಅವರು ತಮ್ಮ ವೃತ್ತಿಜೀವನದಲ್ಲಿ 125 ಟೆಸ್ಟ್ ಮತ್ತು 108 ಏಕದಿನ ಪಂದ್ಯಗಳನ್ನು ಆಡಿದ್ದಾರೆ.

ವಿಶ್ವಕಪ್ ವಿಜೇತ ಹೀರೋ ಕಪಿಲ್ ದೇವ್ ತಮ್ಮ ವೃತ್ತಿಜೀವನದಲ್ಲಿ 131 ಟೆಸ್ಟ್ ಮತ್ತು 225 ಏಕದಿನ ಪಂದ್ಯಗಳನ್ನು ಆಡಿದ್ದಾರೆ.

ದಿಲೀವ್ ವೆಂಗ್‌ಸರ್ಕರ್ ತಮ್ಮ ವೃತ್ತಿಜೀವನದಲ್ಲಿ 116 ಟೆಸ್ಟ್ ಮತ್ತು 129 ಏಕದಿನ ಪಂದ್ಯಗಳನ್ನು ಆಡಿದ್ದಾರೆ.

ಇನ್ನು ಈ ವಿಚಾರದಲ್ಲಿ ಮುಂಚೂಣಿಯಲ್ಲಿರುವ ಸಚಿನ್ ತೆಂಡೂಲ್ಕರ್ ತಮ್ಮ ವೃತ್ತಿಜೀವನದಲ್ಲಿ 200 ಟೆಸ್ಟ್ ಮತ್ತು 463 ಏಕದಿನ ಪಂದ್ಯಗಳನ್ನು ಆಡಿದ್ದಾರೆ.

ರಾಹುಲ್ ದ್ರಾವಿಡ್ ತಮ್ಮ ವೃತ್ತಿ ಜೀವನದಲ್ಲಿ 164 ಟೆಸ್ಟ್ ಮತ್ತು 344 ಏಕದಿನ ಪಂದ್ಯಗಳನ್ನು ಆಡಿದ್ದಾರೆ.

ಅನಿಲ್ ಕುಂಬ್ಳೆ ತಮ್ಮ ವೃತ್ತಿ ಜೀವನದಲ್ಲಿ 132 ಟೆಸ್ಟ್ ಮತ್ತು 271 ಏಕದಿನ ಪಂದ್ಯಗಳನ್ನು ಆಡಿದ್ದಾರೆ.

ಸೌರವ್ ಗಂಗೂಲಿ ಅವರು ತಮ್ಮ ವೃತ್ತಿಜೀವನದಲ್ಲಿ 113 ಟೆಸ್ಟ್ ಮತ್ತು 311 ಏಕದಿನ ಪಂದ್ಯಗಳನ್ನು ಆಡಿದ್ದಾರೆ.

ಹರ್ಭಜನ್ ಸಿಂಗ್ ತಮ್ಮ ವೃತ್ತಿಜೀವನದಲ್ಲಿ 103 ಟೆಸ್ಟ್ ಮತ್ತು 236 ಏಕದಿನ ಪಂದ್ಯಗಳನ್ನು ಆಡಿದ್ದಾರೆ.

ವಿರಾಟ್ ಕೊಹ್ಲಿ ಇಲ್ಲಿಯವರೆಗೆ 113 ಟೆಸ್ಟ್ ಪಂದ್ಯಗಳನ್ನು ಮತ್ತು 292 ಏಕದಿನ ಪಂದ್ಯಗಳನ್ನು ಆಡಿದ್ದಾರೆ.

ರವಿಚಂದ್ರನ್ ಅಶ್ವಿನ್ ಇಂದು 100ನೇ ಟೆಸ್ಟ್ ಆಡಿದ್ದಾರೆ. ಇದಕ್ಕೂ ಮುನ್ನ ಅವರು 116 ಏಕದಿನ ಪಂದ್ಯಗಳನ್ನು ಆಡಿದ್ದರು.