21-01-2024

ಟೆಸ್ಟ್​ನಲ್ಲಿ ಇಂಗ್ಲೆಂಡ್ ವಿರುದ್ಧ ದ್ವಿಶತಕ ಸಿಡಿಸಿದ ಭಾರತದ ಬ್ಯಾಟರ್ಸ್​ ಯಾರ್ಯಾರು ಗೊತ್ತಾ?

Author: ಪೃಥ್ವಿ ಶಂಕರ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದ್ವಿಶತಕ ಸಿಡಿಸಿದ್ದು, 235 ರನ್‌ಗಳ ಇನ್ನಿಂಗ್ಸ್‌ ಆಡಿದ್ದಾರೆ.

ಹಾಗೆಯೇ ಟೀಂ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಕೂಡ ಇಂಗ್ಲೆಂಡ್ ವಿರುದ್ಧ 224 ರನ್‌ಗಳ ಇನ್ನಿಂಗ್ಸ್ ಆಡಿದ್ದಾರೆ.

ಕನ್ನಡಿಗ ಗುಂಡಪ್ಪ ವಿಶ್ವನಾಥ್ ಕೂಡ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 222 ರನ್‌ಗಳ ಇನ್ನಿಂಗ್ಸ್‌ ಆಡಿದ್ದರು.

ಲಿಟಲ್ ಮಾಸ್ಟರ್​ ಸುನಿಲ್ ಗವಾಸ್ಕರ್ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯವೊಂದರಲ್ಲಿ 221 ರನ್‌ಗಳ ಇನ್ನಿಂಗ್ಸ್ ಆಡಿದ್ದಾರೆ.

ಕನ್ನಡಿಗ ರಾಹುಲ್ ದ್ರಾವಿಡ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 217 ರನ್‌ಗಳ ಇನ್ನಿಂಗ್ಸ್ ಆಡಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ನಲ್ಲಿ ಚೇತೇಶ್ವರ ಪೂಜಾರ ಕೂಡ 206 ರನ್‌ಗಳ ಇನ್ನಿಂಗ್ಸ್‌ ಆಡಿದ್ದಾರೆ.

ಮನ್ಸೂರ್ ಅಲಿ ಖಾನ್ ಪಟೌಡಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ನಲ್ಲಿ 203 ರನ್‌ಗಳ ಇನ್ನಿಂಗ್ಸ್ ಆಡಿದ್ದಾರೆ.

ಕನ್ನಡಿಗ ಕರುಣ್ ನಾಯರ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 303 ರನ್‌ಗಳ ಇನಿಂಗ್ಸ್‌ ಆಡಿದ್ದರು.

NEXT: ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 20000ಕ್ಕೂ ಹೆಚ್ಚು ರನ್ ದಾಖಲಿಸಿದ ಭಾರತದ ಬ್ಯಾಟರ್​ಗಳಿವರು