26-06-2024

T20 World Cup: ಸೆಮಿಫೈನಲ್‌ನಲ್ಲಿ ಅರ್ಧಶತಕ ಬಾರಿಸಿದ ಭಾರತೀಯರು

Author: ಪೃಥ್ವಿ ಶಂಕರ

ಟಿ20 ವಿಶ್ವಕಪ್ 2024 ರಲ್ಲಿ ನಾಳೆ ಭಾರತ ಹಾಗೂ ಇಂಗ್ಲೆಂಡ್‌ ನಡುವೆ ಸೆಮಿಫೈನಲ್ ಪಂದ್ಯ ನಡೆಯಲ್ಲಿದೆ.

ಆದರೆ ಅದಕ್ಕೂ ಮುನ್ನ ಟಿ20 ವಿಶ್ವಕಪ್‌ ಸೆಮಿಫೈನಲ್ ಪಂದ್ಯಗಳಲ್ಲಿ ಅರ್ಧಶತಕ ಬಾರಿಸಿದ ಟೀಂ ಇಂಡಿಯಾ ಬ್ಯಾಟರ್​ಗಳು ಯಾರ್ಯಾರು ಎಂಬುದನ್ನು ನೋಡೋಣ.

2007ರ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಯುವರಾಜ್ ಸಿಂಗ್ ಆಸ್ಟ್ರೇಲಿಯಾ ವಿರುದ್ಧ 70 ರನ್‌ಗಳ ಇನ್ನಿಂಗ್ಸ್‌ ಆಡಿದ್ದರು.

ವಿರಾಟ್ ಕೊಹ್ಲಿ 2014 ರ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 44 ಎಸೆತಗಳಲ್ಲಿ 72 ರನ್ ಬಾರಿಸಿದ್ದರು.

ಆ ಬಳಿಕ2016 ರ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲೂ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ವಿರುದ್ಧ 89 ರನ್‌ಗಳ ಇನ್ನಿಂಗ್ಸ್ ಆಡಿದ್ದರು.

2022 ರ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಹಾರ್ದಿಕ್ ಪಾಂಡ್ಯ ಇಂಗ್ಲೆಂಡ್ ವಿರುದ್ಧ 63 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದ್ದರು.

ವಿರಾಟ್ ಕೊಹ್ಲಿ 2022 ರ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ 50 ರನ್‌ಗಳ ಇನ್ನಿಂಗ್ಸ್ ಆಡಿದ್ದರು.

ಆದರೆ ಆ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ 10 ವಿಕೆಟ್‌ಗಳಿಂದ ಸೋಲನುಭವಿಸಿ, ಟಿ20 ವಿಶ್ವಕಪ್​ನಿಂದ ಹೊರಬಿದ್ದಿತ್ತು.