21-01-2024

ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 20000ಕ್ಕೂ ಹೆಚ್ಚು ರನ್ ದಾಖಲಿಸಿದ ಭಾರತದ ಬ್ಯಾಟರ್​ಗಳಿವರು

Author: ಪೃಥ್ವಿ ಶಂಕರ

ಸುನಿಲ್ ಗವಾಸ್ಕರ್ ಭಾರತ ಪರ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಲಿಟಲ್ ಮಾಸ್ಟರ್ ಒಟ್ಟಾರೆ 25834 ರನ್ ಕಲೆಹಾಕಿದ್ದಾರೆ.

ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಭಾರತದ ಪರ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 25396 ರನ್ ಗಳಿಸಿದ್ದಾರೆ.

ಭಾರತ ಪರ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ರಾಹುಲ್ ದ್ರಾವಿಡ್ ಒಟ್ಟು 23794 ರನ್ ಗಳಿಸಿದ್ದಾರೆ.

ಇನ್ನು ಪ್ರಸಕ್ತ ನಡೆಯುತ್ತಿರುವ ರಣಜಿ ಟ್ರೋಫಿಯಲ್ಲಿ ಚೇತೇಶ್ವರ ಪೂಜಾರ ಭಾರತ ಪರ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 20000 ರನ್ ಪೂರೈಸಿದ ನಾಲ್ಕನೇ ಆಟಗಾರ ಎನಿಸಿಕೊಂಡಿದ್ದಾರೆ.

ವಿದರ್ಭ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ 66 ರನ್‌ಗಳ ಇನಿಂಗ್ಸ್‌ ಆಡಿದ ಚೇತೇಶ್ವರ ಪೂಜಾರ ತಮ್ಮ ಪ್ರಥಮ ದರ್ಜೆ ವೃತ್ತಿಜೀವನದಲ್ಲಿ ಇಪ್ಪತ್ತು ಸಾವಿರ ರನ್ ಪೂರೈಸಿದ್ದಾರೆ.

ಭಾರತದ ಪರ 103 ಟೆಸ್ಟ್ ಪಂದ್ಯಗಳನ್ನಾಡಿರುವ ಪೂಜಾರ 43.60 ರ ಸರಾಸರಿಯಲ್ಲಿ 7195 ರನ್ ಗಳಿಸಿದ್ದಾರೆ. ಇದರಲ್ಲಿ 19 ಶತಕ ಮತ್ತು 35 ಟೆಸ್ಟ್ ಅರ್ಧಶತಕಗಳು ಸೇರಿವೆ.

ಪ್ರಸ್ತುತ ನಡೆಯುತ್ತಿರುವ ರಣಜಿ ಟ್ರೋಫಿಯ ಆಡಿರುವ ಮೂರು ಪಂದ್ಯಗಳಲ್ಲಿ 444 ರನ್‌ ಕಲೆಹಾಕಿರುವ ಪೂಜಾರ ಪ್ರಸ್ತುತ ರಣಜಿ ಟ್ರೋಫಿ 2023-24ರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ.