16-06-2024

ಏಕದಿನದಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಭಾರತದ ಮಹಿಳಾ ಆಟಗಾರ್ತಿಯರಿವರು

ಬೆಂಗಳೂರಿನಲ್ಲಿ ಇಂದು ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ವನಿತಾ ತಂಡಗಳ ಮೊದಲ ಏಕದಿನ ಪಂದ್ಯದಲ್ಲಿ ಸ್ಮೃತಿ ಮಂಧಾನ ಭರ್ಜರಿ ಶತಕ ಸಿಡಿಸಿದರು.

ತಮ್ಮ ಇನ್ನಿಂಗ್ಸ್​ನಲ್ಲಿ  127 ಎಸೆತಗಳನ್ನು ಎದುರಿಸಿದ ಸ್ಮೃತಿ 12 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 117 ರನ್ ಬಾರಿಸಿದರು. ಈ ಮೂಲಕ ಏಕದಿನದಲ್ಲಿ ಅಧಿಕ ಶತಕ ಬಾರಿಸಿದ ಎರಡನೇ ಬ್ಯಾಟರ್ ಎನಿಸಿಕೊಂಡರು.

ಅಲ್ಲದೆ ಭಾರತದ ನೆಲದಲ್ಲಿ ಮೊದಲ ಶತಕ ಸಿಡಿಸಿದ ಹೆಗ್ಗಳಿಕೆಗೂ ಪಾತ್ರರಾದರು. ಇನ್ನು ಏಕದಿನದಲ್ಲಿ ಅಧಿಕ ಶತಕ ಸಿಡಿಸಿದ ಭಾರತದ ಮಹಿಳಾ ಆಟಗಾರ್ತಿಯರ ಪಟ್ಟಿಯನ್ನು ನೋಡುವುದಾದರೆ..

ಟೀಂ ಇಂಡಿಯಾದ ಮಾಜಿ ನಾಯಕಿ ಮಿಥಾಲಿ ರಾಜ್ ಹೆಸರಲ್ಲಿ ಈ ದಾಖಲೆ ಇದೆ. ಮಿಥಾಲಿ ಒಟ್ಟು 7 ಶತಕಗಳನ್ನು ಗಳಿಸಿದ್ದಾರೆ.

ಸ್ಮೃತಿ ಮಂಧಾನ ಅವರ ಏಕದಿನ ಶತಕಗಳ ಸಂಖ್ಯೆ 6ಕ್ಕೇರಿದ್ದು, ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

ಹಾಲಿ ನಾಯಕಿ ಹರ್ಮನ್‌ಪ್ರೀತ್ ಕೌರ್ ಏಕದಿನದಲ್ಲಿ ಒಟ್ಟು 5 ಶತಕಗಳನ್ನು ಸಿಡಿಸಿದ್ದಾರೆ.

ಪೂನಂ ರಾವುತ್ ಏಕದಿನದಲ್ಲಿ ಭಾರತ ಮಹಿಳಾ ತಂಡದ ಪರ ಒಟ್ಟು 3 ಶತಕಗಳನ್ನು ಬಾರಿಸಿದ್ದಾರೆ.

ಮಾಜಿ ಆಟಗಾರ್ತಿಯರಾದ ತಿರುಶ್ ಕಾಮಿನಿ ಮತ್ತು ಜಯ ಶರ್ಮಾ ಏಕದಿನದಲ್ಲಿ ಒಟ್ಟು 2 ಶತಕಗಳನ್ನು ಸಿಡಿಸಿದ್ದಾರೆ.