10-06-2024

ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಭಾರತೀಯ ಯಾರು ಗೊತ್ತಾ?

Author: ಪೃಥ್ವಿ ಶಂಕರ

ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಭಾರತೀಯ ಆಟಗಾರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಅವರು ಇಲ್ಲಿಯವರೆಗೆ 7 ಬಾರಿ ಈ ಪ್ರಶಸ್ತಿಯನ್ನು ಗೆದ್ದಿದ್ದಾರೆ

ರವಿಚಂದ್ರನ್ ಅಶ್ವಿನ್ ಇಲ್ಲಿಯವರೆಗೆ ಮೂರು ಬಾರಿ ಟಿ20 ವಿಶ್ವಕಪ್‌ನಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದಿದ್ದು, ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

ಮೂರನೇ ಸ್ಥಾನದಲ್ಲಿರುವ ಯುವರಾಜ್ ಸಿಂಗ್ ಟಿ20 ವಿಶ್ವಕಪ್‌ನಲ್ಲಿ ಮೂರು ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಜಸ್ಪ್ರೀತ್ ಬುಮ್ರಾ ಇಲ್ಲಿಯವರೆಗೆ ಟಿ20 ವಿಶ್ವಕಪ್‌ನಲ್ಲಿ ಎರಡು ಬಾರಿ ಪಂದ್ಯದ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ರವೀಂದ್ರ ಜಡೇಜಾ ಎರಡು ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಗೆದ್ದಿದ್ದಾರೆ.

ಎರಡು ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರರಲ್ಲಿ ಅಮಿತ್ ಮಿಶ್ರಾ ಕೂಡ ಸೇರಿದ್ದಾರೆ.

ರೋಹಿತ್ ಶರ್ಮಾ ಇದುವರೆಗೆ ಟಿ20 ವಿಶ್ವಕಪ್‌ನಲ್ಲಿ ಎರಡು ಬಾರಿ ಪಂದ್ಯದ ಆಟಗಾರ ಪ್ರಶಸ್ತಿ ಪಡೆದಿದ್ದಾರೆ.

ಸೂರ್ಯಕುಮಾರ್ ಯಾದವ್ ಇದುವರೆಗೆ ಟಿ20 ವಿಶ್ವಕಪ್‌ನಲ್ಲಿ ಎರಡು ಬಾರಿ ಪಂದ್ಯದ ಆಟಗಾರ ಪ್ರಶಸ್ತಿ ಪಡೆದಿದ್ದಾರೆ.

NEXT: ಪಾಕ್ ವಿರುದ್ಧದ ಪಂದ್ಯದಲ್ಲಿ ದೊಡ್ಡ ದಾಖಲೆ ಮುರಿಯಲಿದ್ದಾರೆ ಪಾಂಡ್ಯ..!