ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದ ಭಾರತದ ನಾಯಕ ಯಾರು ಗೊತ್ತಾ?
Author: ಪೃಥ್ವಿ ಶಂಕರ
ನಾಯಕನಾಗಿ ಅತಿ ಟೆಸ್ಟ ಪಂದ್ಯಗಳಲ್ಲಿ ತಂಡವನ್ನು ಗೆಲುವಿಗೆ ಮುನ್ನಡೆಸಿದ ಭಾರತೀಯ ನಾಯಕರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದು, ಕಿಂಗ್ ನಾಯಕತ್ವದಲ್ಲಿ ಭಾರತ 40 ಟೆಸ್ಟ್ ಪಂದ್ಯಗಳನ್ನು ಗೆದ್ದಿದೆ.
ಎರಡನೇ ಸ್ಥಾನದಲ್ಲಿರುವ ಎಂಎಸ್ ಧೋನಿ ತಮ್ಮ ನಾಯಕತ್ವದಲ್ಲಿ ಟೀಂ ಇಂಡಿಯಾವನ್ನು 27 ಟೆಸ್ಟ್ ಪಂದ್ಯಗಳಲ್ಲಿ ಗೆಲುವಿಗೆ ಮುನ್ನಡೆಸಿದ್ದಾರೆ.
ಸೌರವ್ ಗಂಗೂಲಿ ನಾಯಕತ್ವದಲ್ಲಿ ಟೀಂ ಇಂಡಿಯಾ 21 ಟೆಸ್ಟ್ ಪಂದ್ಯಗಳನ್ನು ಗೆದ್ದಿದೆ.
ಮೊಹಮ್ಮದ್ ಅಜರುದ್ದೀನ್ ನಾಯಕತ್ವದಲ್ಲಿ ಟೀಂ ಇಂಡಿಯಾ 14 ಟೆಸ್ಟ್ ಪಂದ್ಯಗಳನ್ನು ಗೆದ್ದಿತ್ತು.
ಸುನಿಲ್ ಗವಾಸ್ಕರ್ ಅವರ ನಾಯಕತ್ವದಲ್ಲಿ ಟೀಂ ಇಂಡಿಯಾ 9 ಟೆಸ್ಟ್ ಪಂದ್ಯಗಳನ್ನು ಗೆದ್ದಿತ್ತು.
ಇದೀಗ ರೋಹಿತ್ ಶರ್ಮಾ ನಾಯಕನಾಗಿ ಟೀಂ ಇಂಡಿಯಾವನ್ನು 9 ಟೆಸ್ಟ್ ಪಂದ್ಯಗಳಲ್ಲಿ ಗೆಲುವಿಗೆ ಮುನ್ನಡೆಸಿದ್ದಾರೆ.
ಮನ್ಸೂರ್ ಅಲಿ ಖಾನ್ ಪಟೌಡಿ ನಾಯಕತ್ವದಲ್ಲಿ ಟೀಂ ಇಂಡಿಯಾ 9 ಟೆಸ್ಟ್ ಪಂದ್ಯಗಳನ್ನು ಗೆದ್ದಿದೆ.
ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಭಾರತ ತಂಡ 8 ಟೆಸ್ಟ್ ಪಂದ್ಯಗಳನ್ನು ಗೆದ್ದಿದೆ.
ಬಿಷನ್ ಸಿಂಗ್ ಬೇಡಿ ಅವರು ಟೆಸ್ಟ್ ನಾಯಕರಾಗಿ 6 ಪಂದ್ಯಗಳನ್ನು ತಂಡವನ್ನು ಗೆಲುವಿಗೆ ಮುನ್ನಡೆಸಿದ್ದರು.
NEXT: ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ 5 ವಿಕೆಟ್ ಪಡೆದ ಬೌಲರ್‌ಗಳಿವರು