26-04-2024

IPL 2024: ಆರಂಭಿಕನಾಗಿ ದಾಖಲೆ ಬರೆದ ವಿರಾಟ್ ಕೊಹ್ಲಿ..!

Author: ಪೃಥ್ವಿ ಶಂಕರ

ಐಪಿಎಲ್‌ನಲ್ಲಿ ಆರಂಭಿಕನಾಗಿ ಅತಿ ಹೆಚ್ಚು ರನ್ ಕಲೆಹಾಕಿರುವ ಬ್ಯಾಟರ್​ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಇದೀಗ 4ನೇ ಸ್ಥಾನಕ್ಕೇರಿದ್ದಾರೆ.

ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಶಿಖರ್ ಧವನ್ ಐಪಿಎಲ್‌ನಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಆಗಿ 6362 ರನ್ ಬಾರಿಸಿದ್ದಾರೆ.

ಎರಡನೇ ಸ್ಥಾನದಲ್ಲಿರುವ ಡೇವಿಡ್ ವಾರ್ನರ್ ಇದುವರೆಗೆ 5909 ರನ್ ಕಲೆಹಾಕಿದ್ದಾರೆ.

ಕ್ರಿಸ್ ಗೇಲ್ ಐಪಿಎಲ್‌ನಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಆಗಿ 4480 ರನ್ ಬಾರಿಸಿದ್ದು, ಮೂರನೇ ಸ್ಥಾನದಲ್ಲಿದ್ದಾರೆ.

ಇದೀಗ ನಾಲ್ಕನೇ ಸ್ಥಾನಕ್ಕೇರಿರುವ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಆಗಿ ಇದುವರೆಗೆ 4041 ರನ್ ಬಾರಿಸಿದ್ದಾರೆ.

ಕನ್ನಡಿಗ ಕೆಎಲ್ ರಾಹುಲ್ ಕೂಡ ಆರಂಭಿಕನಾಗಿ ಇದುವರೆಗೆ 3965 ರನ್ ಬಾರಿಸಿದ್ದಾರೆ.

ಅಜಿಂಕ್ಯ ರಹಾನೆ ಐಪಿಎಲ್‌ನಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಆಗಿ 3637 ರನ್ ಗಳಿಸಿದ್ದಾರೆ.

ಐಪಿಎಲ್‌ನಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಆಗಿ ಫಾಫ್ ಡು ಪ್ಲೆಸಿಸ್ ಇದುವರೆಗೆ 3628 ರನ್ ಗಳಿಸಿದ್ದಾರೆ.

ಗೌತಮ್ ಗಂಭೀರ್ ಐಪಿಎಲ್‌ನಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಆಗಿ 3597 ರನ್ ಕಲೆ ಹಾಕಿದ್ದಾರೆ.