13-05-2024

IPL: ಐಪಿಎಲ್‌ನಲ್ಲಿ ವಿಶೇಷ ಮೈಲಿಗಲ್ಲು ದಾಟಿದ ಕಿಂಗ್ ಕೊಹ್ಲಿ

Author: ಪೃಥ್ವಿ ಶಂಕರ

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ 250 ಪಂದ್ಯಗಳನ್ನು ಪೂರೈಸಿದ್ದಾರೆ.

ಇದರೊಂದಿಗೆ ಏಕೈಕ ತಂಡದಲ್ಲಿ ಅತಿ ಹೆಚ್ಚು ಐಪಿಎಲ್ ಪಂದ್ಯಗಳನ್ನು ಆಡಿದ ಮೊದಲ ಆಟಗಾರ ಎಂಬ ದಾಖಲೆಯನ್ನು ಬರೆದಿದ್ದಾರೆ.

ಇದಲ್ಲದೆ ಕೊಹ್ಲಿ ಐಪಿಎಲ್​ನಲ್ಲಿ ಅಧಿಕ ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿಯಲ್ಲಿ ಇದೀಗ 4ನೇ ಸ್ಥಾನಕ್ಕೇರಿದ್ದಾರೆ.

ಇನ್ನು ಈ  ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಮಹೇಂದ್ರ ಸಿಂಗ್ ಧೋನಿ ಐಪಿಎಲ್‌ ವೃತ್ತಿಜೀವನದಲ್ಲಿ ಇದುವರೆಗೆ 263 ಪಂದ್ಯಗಳನ್ನು ಆಡಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಐಪಿಎಲ್‌ನಲ್ಲಿ 256 ಪಂದ್ಯಗಳನ್ನು ಆಡಿದ್ದು ಎರಡನೇ ಸ್ಥಾನದಲ್ಲಿದ್ದಾರೆ.

ಮೂರನೇ ಸ್ಥಾನದಲ್ಲಿರುವ ಆರ್‌ಸಿಬಿಯ ಸ್ಟಾರ್ ಫಿನಿಶರ್ ದಿನೇಶ್ ಕಾರ್ತಿಕ್ ಐಪಿಎಲ್‌ನಲ್ಲಿ 255 ಪಂದ್ಯಗಳನ್ನು ಆಡಿದ್ದಾರೆ.

ಸಿಎಸ್‌ಕೆಯ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಐಪಿಎಲ್‌ನಲ್ಲಿ 239 ಪಂದ್ಯಗಳನ್ನು ಆಡಿದ್ದು, ಕೊಹ್ಲಿಯ ನಂತರದ ಸ್ಥಾನದಲ್ಲಿದ್ದಾರೆ.

ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್ ಐಪಿಎಲ್‌ನಲ್ಲಿ ಇದುವರೆಗೆ 222 ಪಂದ್ಯಗಳನ್ನು ಆಡಿದ್ದಾರೆ.

ಪ್ರಸ್ತುತ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ರವಿಚಂದ್ರನ್ ಅಶ್ವಿನ್ ಐಪಿಎಲ್‌ನಲ್ಲಿ 208 ಪಂದ್ಯಗಳನ್ನು ಆಡಿದ್ದಾರೆ.

ಸಿಎಸ್‌ಕೆ ಮಾಜಿ ಆಟಗಾರ ಸುರೇಶ್ ರೈನಾ ಐಪಿಎಲ್‌ನಲ್ಲಿ 205 ಪಂದ್ಯಗಳನ್ನು ಆಡಿದ್ದಾರೆ.

ಕನ್ನಡಿಗ ರಾಬಿನ್ ಉತ್ತಪ್ಪ ಕೂಡ ಈ ಪಟ್ಟಿಯಲ್ಲಿದ್ದು, ಐಪಿಎಲ್‌ನಲ್ಲಿ ಅವರು 205 ಪಂದ್ಯಗಳನ್ನು ಆಡಿದ್ದಾರೆ.