ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಕಡಿಮೆ ಓವರ್‌ಗಳಲ್ಲಿ ಮುಗಿದ ಪಂದ್ಯಗಳಿವು
Author: ಪೃಥ್ವಿ ಶಂಕರ
ಇಂದು ಮುಗಿದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಪಂದ್ಯ 107 ಓವರ್‌ಗಳಲ್ಲಿ ಕೊನೆಗೊಂಡಿತು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದೆ.
1932ರಲ್ಲಿ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆದ ಟೆಸ್ಟ್ ಪಂದ್ಯ 109.2 ಓವರ್‌ಗಳಲ್ಲಿ ಕೊನೆಗೊಂಡಿತು. ಈ ಪಂದ್ಯವನ್ನು ಆಸ್ಟ್ರೇಲಿಯಾ ಗೆದ್ದಿತ್ತು.
1935 ರಲ್ಲಿ ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ನಡುವೆ ನಡೆದ ಟೆಸ್ಟ್ ಪಂದ್ಯವು 112 ಓವರ್‌ಗಳಲ್ಲಿ ಕೊನೆಗೊಂಡಿತು. ಈ ಪಂದ್ಯವನ್ನು ಇಂಗ್ಲೆಂಡ್ ಗೆದ್ದಿತ್ತು.
1888 ರಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಟೆಸ್ಟ್ ಪಂದ್ಯವು 197 ಓವರ್‌ಗಳಲ್ಲಿ (ಓವರ್‌ನಲ್ಲಿ ಕೇವಲ 4 ಎಸೆತಗಳು) ಕೊನೆಗೊಂಡಿತು. ಈ ಪಂದ್ಯವನ್ನು ಇಂಗ್ಲೆಂಡ್ ಗೆದ್ದಿತ್ತು.
1888 ರಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಟೆಸ್ಟ್ ಪಂದ್ಯವು 198 ಓವರ್‌ಗಳಲ್ಲಿ (ಓವರ್‌ನಲ್ಲಿ ಕೇವಲ 4 ಎಸೆತಗಳು) ಕೊನೆಗೊಂಡಿತು. ಈ ಪಂದ್ಯವನ್ನು ಆಸ್ಟ್ರೇಲಿಯಾ ಗೆದ್ದಿತ್ತು.
1889 ರಲ್ಲಿ ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ನಡುವೆ ನಡೆದ ಟೆಸ್ಟ್ ಪಂದ್ಯವು 199 ಓವರ್‌ಗಳಲ್ಲಿ ಕೊನೆಗೊಂಡಿತು (ಒಂದು ಓವರ್‌ಗೆ ಕೇವಲ 4 ಎಸೆತಗಳು). ಈ ಪಂದ್ಯವನ್ನು ಇಂಗ್ಲೆಂಡ್ ಗೆದ್ದಿತ್ತು.
1912ರಲ್ಲಿ ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆದ ಟೆಸ್ಟ್ ಪಂದ್ಯ 135.5 ಓವರ್‌ಗಳಲ್ಲಿ ಕೊನೆಗೊಂಡಿತು. ಈ ಪಂದ್ಯವನ್ನು ಇಂಗ್ಲೆಂಡ್ ಗೆದ್ದಿತ್ತು.
2021 ರಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಟೆಸ್ಟ್ ಪಂದ್ಯ 140.2 ಓವರ್‌ಗಳಲ್ಲಿ ಕೊನೆಗೊಂಡಿತು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿತ್ತು.
2022 ರಲ್ಲಿ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆದ ಟೆಸ್ಟ್ ಪಂದ್ಯ 144.2 ಓವರ್‌ಗಳಲ್ಲಿ ಕೊನೆಗೊಂಡಿತು. ಈ ಪಂದ್ಯವನ್ನು ಆಸ್ಟ್ರೇಲಿಯಾ ಗೆದ್ದಿತ್ತು.
1946ರಲ್ಲಿ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಟೆಸ್ಟ್ ಪಂದ್ಯ 145.2 ಓವರ್‌ಗಳಲ್ಲಿ ಕೊನೆಗೊಂಡಿತು. ಈ ಪಂದ್ಯವನ್ನು ಆಸ್ಟ್ರೇಲಿಯಾ ಗೆದ್ದಿತ್ತು.
NEXT: ಆಫ್ರಿಕಾ ನೆಲದಲ್ಲಿ ಟೆಸ್ಟ್ ಪಂದ್ಯ ಗೆದ್ದ ಟೀಂ ಇಂಡಿಯಾ ನಾಯಕರಿವರು