29-02-2024

ಟೆಸ್ಟ್‌ನಲ್ಲಿ ಅತಿವೇಗದ ದ್ವಿಶತಕ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?

Author: ಪೃಥ್ವಿ ಶಂಕರ

ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ವೇಗದ ದ್ವಿಶತಕ ಸಿಡಿಸಿದ ದಾಖಲೆ ನ್ಯೂಜಿಲೆಂಡ್‌ನ ನಾಥನ್ ಆಸ್ಟಲ್ ಹೆಸರಿನಲ್ಲಿದೆ. 2002ರಲ್ಲಿ ಇಂಗ್ಲೆಂಡ್ ವಿರುದ್ಧ 153 ಎಸೆತಗಳಲ್ಲಿ ದ್ವಿಶತಕ ಸಿಡಿಸಿದ್ದರು.

ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಬೆನ್ ಸ್ಟೋಕ್ಸ್ 2016 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ನಲ್ಲಿ ಕೇವಲ 163 ಎಸೆತಗಳಲ್ಲಿ ದ್ವಿಶತಕ ಪೂರೈಸಿದ್ದರು.

ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಭಾರತದ ವೀರೇಂದ್ರ ಸೆಹ್ವಾಗ್, 2009 ರಲ್ಲಿ ಶ್ರೀಲಂಕಾ ವಿರುದ್ಧ ಕೇವಲ 168 ಎಸೆತಗಳಲ್ಲಿ ದ್ವಿಶತಕ ಗಳಿಸಿದ್ದರು.

ನಾಲ್ಕನೇ ಸ್ಥಾನದಲ್ಲೂ ವೀರೇಂದ್ರ ಸೆಹ್ವಾಗ್ ಇದ್ದು, ಅವರು ಈ ಹಿಂದೆ 2006ರಲ್ಲಿ ಪಾಕಿಸ್ತಾನ ವಿರುದ್ಧ 182 ಎಸೆತಗಳಲ್ಲಿ ದ್ವಿಶತಕ ಸಿಡಿಸಿದ್ದರು.

ನ್ಯೂಜಿಲೆಂಡ್‌ನ ಬ್ರೆಂಡನ್ ಮೆಕಲಮ್ 2014 ರಲ್ಲಿ ಪಾಕಿಸ್ತಾನ ವಿರುದ್ಧ 186 ಎಸೆತಗಳಲ್ಲಿ 200 ರನ್ ಸಿಡಿಸಿದ್ದರು.

ಈ ಪಟ್ಟಿಯಲ್ಲಿ ಮೂರನೇ ಬಾರಿಗೆ ಕಾಣಿಸಿಕೊಂಡಿರುವ ವೀರೇಂದ್ರ ಸೆಹ್ವಾಗ್, 2008ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 194 ಎಸೆತಗಳಲ್ಲಿ ದ್ವಿಶತಕ ಗಳಿಸಿದ್ದರು.

ಇಂಗ್ಲೆಂಡ್‌ನ ಓಲಿ ಪೋಪ್ 2023ರಲ್ಲಿ ಐರ್ಲೆಂಡ್ ವಿರುದ್ಧ 207 ಎಸೆತಗಳಲ್ಲಿ ದ್ವಿಶತಕ ಸಿಡಿಸಿದ್ದರು.

ದಕ್ಷಿಣ ಆಫ್ರಿಕಾದ ಹರ್ಷಲ್ ಗಿಬ್ಸ್ 2003ರಲ್ಲಿ ಪಾಕಿಸ್ತಾನ ವಿರುದ್ಧ 211 ಎಸೆತಗಳಲ್ಲಿ ದ್ವಿಶತಕ ಸಿಡಿಸಿದ್ದರು.

ನ್ಯೂಜಿಲೆಂಡ್‌ನ ರಾಸ್ ಟೇಲರ್ 2019 ರಲ್ಲಿ ಬಾಂಗ್ಲಾದೇಶ ವಿರುದ್ಧ 211 ಎಸೆತಗಳಲ್ಲಿ ದ್ವಿಶತಕ ಪೂರೈಸಿದ್ದರು.