10-02-2024

ಏಕದಿನ ಪಂದ್ಯವೊಂದರಲ್ಲಿ ಅತಿ ಹೆಚ್ಚು ರನ್ ಸಿಡಿಸಿದ ಟಾಪ್ 10 ಬ್ಯಾಟರ್​ಗಳಿವರು

Author: ಪೃಥ್ವಿ ಶಂಕರ

2014ರಲ್ಲಿ ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಅತ್ಯಧಿಕ 264 ರನ್ ಸಿಡಿಸಿದ್ದರು.

ಮಾರ್ಟಿನ್ ಗಪ್ಟಿಲ್ 2015 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 237 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದ್ದರು.

ವೀರೇಂದ್ರ ಸೆಹ್ವಾಗ್ 2011 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 219 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದರು.

ಕ್ರಿಸ್ ಗೇಲ್ 2015 ರಲ್ಲಿ ಜಿಂಬಾಬ್ವೆ ವಿರುದ್ಧದ ಏಕದಿನ ಪಂದ್ಯದಲ್ಲಿ 215 ರನ್ ಕಲೆಹಾಕಿದ್ದರು.

2018 ರಲ್ಲಿ ಜಿಂಬಾಬ್ವೆ ವಿರುದ್ಧ ಪಾಕಿಸ್ತಾನದ ಫಖರ್ ಜಮಾನ್ 210 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದ್ದರು.

ಇದೀಗ ಅಫ್ಘಾನಿಸ್ತಾನ ವಿರುದ್ಧ ಶ್ರೀಲಂಕಾದ ಪಾಥುಮ್ ನಿಸ್ಸಾಂಕಾ 210 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದ್ದಾರೆ.

ಭಾರತದ ಇಶಾನ್ ಕಿಶನ್ 2022 ರಲ್ಲಿ ಬಾಂಗ್ಲಾದೇಶ ವಿರುದ್ಧ 210 ರನ್ ಸಿಡಿಸಿದ್ದರು.

2013ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ 209 ರನ್‌ಗಳ ಇನಿಂಗ್ಸ್ ಆಡಿದ್ದರು.

2017ರಲ್ಲಿ ಶ್ರೀಲಂಕಾ ವಿರುದ್ಧ ರೋಹಿತ್ ಶರ್ಮಾ 208 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದ್ದರು.

2023 ರಲ್ಲಿ ನ್ಯೂಜಿಲೆಂಡ್ ವಿರುದ್ಧ ಆರಂಭಿಕ ಶುಭ್‌ಮನ್ ಗಿಲ್ 208 ರನ್‌ಗಳ ಇನಿಂಗ್ಸ್ ಆಡಿದ್ದರು.