ಟೆಸ್ಟ್ ಇನ್ನಿಂಗ್ಸ್ವೊಂದರಲ್ಲಿ ಭಾರತದ ವಿರುದ್ಧ ಕಡಿಮೆ ಮೊತ್ತಕ್ಕೆ ಆಲೌಟ್ ಆದ ತಂಡಗಳಿವು
Author: ಪೃಥ್ವಿ ಶಂಕರ
ಇಂದಿನಿಂದ ಆರಂಭವಾಗಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ 55 ರನ್‌ಗಳಿಗೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ 15 ರನ್ ನೀಡಿ 6 ವಿಕೆಟ್ ಕಬಳಿಸಿದ್ದಾರೆ.
ಇದಕ್ಕೂ ಮೊದಲು, ನ್ಯೂಜಿಲೆಂಡ್ ತಂಡವು 3 ಡಿಸೆಂಬರ್ 2021 ರಂದು ಕೇವಲ 62 ರನ್‌ಗಳಿಗೆ ಇನ್ನಿಂಗ್ಸ್ ಮುಗಿಸಿತ್ತು. ಈ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ 8 ರನ್ ನೀಡಿ ನಾಲ್ಕು ವಿಕೆಟ್ ಪಡೆದಿದ್ದರು.
ದಕ್ಷಿಣ ಆಫ್ರಿಕಾ ಈ ಹಿಂದೆ 25 ನವೆಂಬರ್ 2015 ರಂದು 79 ರನ್‌ಗಳಿಗೆ ಆಲೌಟ್ ಆಗಿತ್ತು. ಈ ಪಂದ್ಯದಲ್ಲಿ ಅಶ್ವಿನ್ 32 ರನ್ ನೀಡಿ 5 ವಿಕೆಟ್ ಉರುಳಿಸಿದ್ದರು.
24 ಫೆಬ್ರವರಿ 2021 ರಂದು ಇಂಗ್ಲೆಂಡ್ ತಂಡ ಕೇವಲ 81 ರನ್‌ಗಳಿಗೆ ಇನ್ನಿಂಗ್ಸ್ ಮುಗಿಸಿತ್ತು. ಈ ಪಂದ್ಯದಲ್ಲಿ ಅಕ್ಷರ್ ಪಟೇಲ್ 32 ರನ್ ನೀಡಿ 5 ವಿಕೆಟ್ ಪಡೆದಿದ್ದರು.
ಶ್ರೀಲಂಕಾ ಕ್ರಿಕೆಟ್ ತಂಡವು 23 ನವೆಂಬರ್ 1990 ರಂದು 82 ರನ್‌ಗಳಿಗೆ ಆಲೌಟ್ ಆಗಿತ್ತು. ಈ ಇನ್ನಿಂಗ್ಸ್‌ನಲ್ಲಿ ವೆಂಕಟಪತಿ ರಾಜು 12 ರನ್‌ಗಳಿಗೆ 6 ವಿಕೆಟ್ ಪಡೆದಿದ್ದರು.
1981ರ ಫೆಬ್ರುವರಿ 7ರಂದು ಆಸ್ಟ್ರೇಲಿಯಾ ತಂಡ 83 ರನ್‌ಗಳಿಗೆ ಕುಸಿದಿತ್ತು. ಈ ಪಂದ್ಯದಲ್ಲಿ ಕಪಿಲ್ ದೇವ್ 28 ರನ್ ನೀಡಿ 5 ವಿಕೆಟ್ ಪಡೆದಿದ್ದರು.
2006 ರ ಡಿಸೆಂಬರ್ 15 ರಂದು ದಕ್ಷಿಣ ಆಫ್ರಿಕಾ ತಂಡವು ಕೇವಲ 84 ರನ್ ಗಳಿಸಲಷ್ಟೇ ಶಕ್ತವಾಗಿತ್ತು. ಈ ಪಂದ್ಯದಲ್ಲಿ ಶ್ರೀಶಾಂತ್ 40 ರನ್ ನೀಡಿ 5 ವಿಕೆಟ್ ಪಡೆದಿದ್ದರು.
ಬಾಂಗ್ಲಾದೇಶ ತಂಡವು 10 ನವೆಂಬರ್ 2000 ರಂದು ಕೇವಲ 91 ರನ್‌ಗಳಿಗೆ ಆಲೌಟ್ ಆಗಿತ್ತು. ಈ ಪಂದ್ಯದಲ್ಲಿ ಜಾವಗಲ್ ಶ್ರೀನಾಥ್ 19 ರನ್ ಹಾಗೂ ಸುನಿಲ್ ಜೋಶಿ 27 ರನ್ ನೀಡಿ ತಲಾ ಮೂರು ವಿಕೆಟ್ ಪಡೆದಿದ್ದರು.