03-02-2024

ಹೆಚ್ಚು ಬಾರಿ 5 ವಿಕೆಟ್ ಪಡೆದ ಭಾರತದ ವೇಗದ ಬೌಲರ್​ಗಳಿವರು

Author: ಪೃಥ್ವಿ ಶಂಕರ

ಕಪಿಲ್ ದೇವ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 24 ಬಾರಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದು, ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಎರಡನೇ ಸ್ಥಾನದಲ್ಲಿರುವ ಜಾವಗಲ್ ಶ್ರೀನಾಥ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 13 ಬಾರಿ 5 ವಿಕೆಟ್ ಪಡೆದಿದ್ದಾರೆ.

ಮೂರನೇ ಸ್ಥಾನಕ್ಕೆ ಎಂಟ್ರಿಕೊಟ್ಟಿರುವ ಜಸ್ಪ್ರೀತ್ ಬುಮ್ರಾ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 12 ಬಾರಿ 5 ವಿಕೆಟ್ ಪಡೆದಿದ್ದಾರೆ.

ಜಹೀರ್ ಖಾನ್ ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ 12 ಬಾರಿ 5 ವಿಕೆಟ್ ಪಡೆದಿದ್ದು, 4ನೇ ಸ್ಥಾನದಲ್ಲಿದ್ದಾರೆ.

ಮೊಹಮ್ಮದ್ ಶಮಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 11 ಬಾರಿ 5 ವಿಕೆಟ್ ಪಡೆದಿದ್ದು, ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ.

ಇಶಾಂತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 11 ಬಾರಿ 5 ವಿಕೆಟ್ ಪಡೆದಿದ್ದಾರೆ.

ಇರ್ಫಾನ್ ಪಠಾಣ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 9 ಬಾರಿ 5 ವಿಕೆಟ್ ಪಡೆದಿದ್ದಾರೆ.