12-01-2024
ಕ್ರಿಕೆಟ್ ಇತಿಹಾಸದಲ್ಲಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಭಾರತೀಯ ಬ್ಯಾಟರ್ಗಳಿವರು
Author: ಪೃಥ್ವಿ ಶಂಕರ
ವೇಗಿ ಜಹೀರ್ ಖಾನ್ ತಮ್ಮ ವೃತ್ತಿ ಜೀವನದಲ್ಲಿ 43 ಬಾರಿ ಖಾತೆ ತೆರೆಯದೆ ಔಟಾಗಿದ್ದು, ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
ಮತ್ತೊಬ್ಬ ವೇಗಿ ಇಶಾಂತ್ ಶರ್ಮಾ 40 ಬಾರಿ ಖಾತೆ ತೆರೆಯದೆ ಔಟಾಗಿದ್ದಾರೆ.
ಹರ್ಭಜನ್ ಸಿಂಗ್ ತಮ್ಮ ವೃತ್ತಿಜೀವನದಲ್ಲಿ 37 ಬಾರಿ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದ್ದರು.
ಅನಿಲ್ ಕುಂಬ್ಳೆ ತಮ್ಮ ವೃತ್ತಿಜೀವನದಲ್ಲಿ 35 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು.
ಸಚಿನ್ ತೆಂಡೂಲ್ಕರ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಖಾತೆ ತೆರೆಯದೆ 34 ಬಾರಿ ಔಟಾಗಿದ್ದರು.
ವಿರಾಟ್ ಕೊಹ್ಲಿ ಕೂಡ ತಮ್ಮ ವೃತ್ತಿ ಜೀವನದಲ್ಲಿ 34 ಬಾರಿ ಖಾತೆ ತೆರೆಯದೆ ಔಟಾಗಿದ್ದಾರೆ.
ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 32 ಬಾರಿ ಖಾತೆ ತೆರೆಯದೆ ಔಟಾಗಿದ್ದಾರೆ.
ಜಾವಗಲ್ ಶ್ರೀನಾಥ್ ಕೂಡ ತಮ್ಮ ವೃತ್ತಿ ಜೀವನದಲ್ಲಿ 32 ಬಾರಿ ಖಾತೆ ತೆರೆಯದೆ ಔಟಾಗಿದ್ದರು.
ವೀರೇಂದ್ರ ಸೆಹ್ವಾಗ್ ತಮ್ಮ ವೃತ್ತಿಜೀವನದಲ್ಲಿ 31 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ.
NEXT: ಟಿ20 ಕ್ರಿಕೆಟ್‌ನಲ್ಲಿ ಮಾರ್ಟಿನ್ ಗಪ್ಟಿಲ್ ದಾಖಲೆ ಮುರಿದ ಬಾಬರ್