20-01-2024

ಡಬ್ಲ್ಯುಟಿಸಿಯಲ್ಲಿ ಅತಿ ಹೆಚ್ಚು ಪಂದ್ಯಗಳ ನಾಯಕತ್ವ ವಹಿಸಿದ ಆಟಗಾರ ಯಾರು ಗೊತ್ತಾ?

Author: ಪೃಥ್ವಿ ಶಂಕರ

ಡಬ್ಲ್ಯುಟಿಸಿಯಲ್ಲಿ 32 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿರುವ ಇಂಗ್ಲೆಂಡ್‌ನ ಮಾಜಿ ನಾಯಕ ಜೋ ರೂಟ್ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಇದುವರೆಗೆ 26 ಪಂದ್ಯಗಳಲ್ಲಿ ನಾಯಕತ್ವ ವಹಿಸಿದ್ದು ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

ಶ್ರೀಲಂಕಾದ ದಮುತ್ ಕರುಣರತ್ನೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ 24 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದಾರೆ.

ವೆಸ್ಟ್ ಇಂಡೀಸ್‌ನ ಕ್ರೇಗ್ ಬ್ರಾಥ್‌ವೈಟ್ 23 ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಪಂದ್ಯಗಳಲ್ಲಿ ತಮ್ಮ ತಂಡದ ನಾಯಕತ್ವ ವಹಿಸಿದ್ದಾರೆ.

ವಿರಾಟ್ ಕೊಹ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ 22 ಪಂದ್ಯಗಳಲ್ಲಿ ತಂಡದ ನಾಯಕತ್ವ ವಹಿಸಿದ್ದಾರೆ.

ಪಾಕಿಸ್ತಾನದ ಬಾಬರ್ ಆಝಂ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ 18 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದಾರೆ.

ಇಂಗ್ಲೆಂಡ್‌ನ ಬೆನ್ ಸ್ಟೋಕ್ಸ್ ಇದುವರೆಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ 17 ಪಂದ್ಯಗಳಲ್ಲಿ ತಮ್ಮ ತಂಡದ ನಾಯಕತ್ವ ವಹಿಸಿದ್ದಾರೆ.

ದಕ್ಷಿಣ ಆಫ್ರಿಕಾದ ಡೀನ್ ಎಲ್ಗರ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ 16 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದಾರೆ.

ಬಾಂಗ್ಲಾದೇಶದ ಮೊಮಿನುಲ್ ಹಕ್ 15 ಪಂದ್ಯಗಳಲ್ಲಿ ತಮ್ಮ ತಂಡದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ಆಸ್ಟ್ರೇಲಿಯಾದ ಟಿಮ್ ಪೈನ್ ಅವರು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ 14 ಪಂದ್ಯಗಳಲ್ಲಿ ತಮ್ಮ ತಂಡದ ನಾಯಕತ್ವ ನಿರ್ವಹಿಸಿದ್ದಾರೆ.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ 48 ಪಂದ್ಯಗಳನ್ನಾಡಿರುವ ಜೋ ರೂಟ್ ಒಟ್ಟು 4018 ರನ್ ಕಲೆಹಾಕಿ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ಇದುವರೆಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ 13 ಪಂದ್ಯಗಳಲ್ಲಿ ತಮ್ಮ ತಂಡದ ನಾಯಕತ್ವ ವಹಿಸಿದ್ದಾರೆ.