ಟಿ20 ವಿಶ್ವಕಪ್ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟರ್ಗಳಿವರು
Author: Zahir
PC- Google
1- ಕ್ರಿಸ್ ಗೇಲ್
ವೆಸ್ಟ್ ಇಂಡೀಸ್ನ ಮಾಜಿ ಸ್ಪೋಟಕ ದಾಂಡಿಗ ಕ್ರಿಸ್ ಗೇಲ್ ಟಿ20 ವಿಶ್ವಕಪ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ಹೊಂದಿದ್ದಾರೆ. ಟಿ20 ವಿಶ್ವಕಪ್ನಲ್ಲಿ 31 ಇನಿಂಗ್ಸ್ ಆಡಿರುವ ಗೇಲ್ ಒಟ್ಟು 63 ಸಿಕ್ಸ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದಾರೆ.
PC- Google
2- ರೋಹಿತ್ ಶರ್ಮಾ
ಭಾರತ ತಂಡದ ನಾಯಕ ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಟಿ20 ವಿಶ್ವಕಪ್ನಲ್ಲಿ 36 ಇನಿಂಗ್ಸ್ ಆಡಿರುವ ಹಿಟ್ಮ್ಯಾನ್ ಒಟ್ಟು 35 ಸಿಕ್ಸ್ ಸಿಡಿಸಿ ಈ ದಾಖಲೆ ಬರೆದಿದ್ದಾರೆ.
PC- Google
3- ಜೋಸ್ ಬಟ್ಲರ್
ಟಿ20 ವಿಶ್ವಕಪ್ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಇಂಗ್ಲೆಂಡ್ನ ಜೋಸ್ ಬಟ್ಲರ್ 3ನೇ ಸ್ಥಾನದಲ್ಲಿದ್ದಾರೆ. ಬಟ್ಲರ್ 27 ಇನಿಂಗ್ಸ್ಗಳಿಂದ ಒಟ್ಟು 33 ಸಿಕ್ಸ್ ಬಾರಿಸಿದ್ದಾರೆ.
PC- Google
4- ಯುವರಾಜ್ ಸಿಂಗ್
ಟಿ20 ವಿಶ್ವಕಪ್ನಲ್ಲಿ 28 ಇನಿಂಗ್ಸ್ ಆಡಿರುವ ಸಿಕ್ಸರ್ ಸಿಂಗ್ ಖ್ಯಾತಿಯ ಯುವರಾಜ್ ಸಿಂಗ್ ಒಟ್ಟು 33 ಸಿಕ್ಸ್ ಸಿಡಿಸಿದ್ದಾರೆ. ಈ ಮೂಲಕ ಸಿಕ್ಸರ್ ಸರದಾರರ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.
PC- Google
5- ಶೇನ್ ವಾಟ್ಸನ್
ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ ಶೇನ್ ವಾಟ್ಸನ್ ಟಿ20 ವಿಶ್ವಕಪ್ನಲ್ಲಿ 22 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 31 ಸಿಕ್ಸ್ ಸಿಡಿಸುವ ಮೂಲಕ ಈ ಪಟ್ಟಿಯಲ್ಲಿ 5ನೇ ಸ್ಥಾನ ಅಲಂಕರಿಸಿದ್ದಾರೆ.
PC- Google
6- ಡೇವಿಡ್ ವಾರ್ನರ್
ಟಿ20 ವಿಶ್ವಕಪ್ನಲ್ಲಿ 34 ಇನಿಂಗ್ಸ್ ಆಡಿರುವ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಒಟ್ಟು 31 ಸಿಕ್ಸ್ಗಳನ್ನು ಬಾರಿಸಿದ್ದಾರೆ.
PC- Google
7- ಎಬಿ ಡಿವಿಲಿಯರ್ಸ್
ಸೌತ್ ಆಫ್ರಿಕಾ ತಂಡದ ಮಾಜಿ ಸ್ಪೋಟಕ ದಾಂಡಿಗ ಎಬಿ ಡಿವಿಲಿಯರ್ಸ್ ಟಿ20 ವಿಶ್ವಕಪ್ನಲ್ಲಿ ಒಟ್ಟು 29 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 30 ಸಿಕ್ಸ್ಗಳನ್ನು ಬಾರಿಸಿದ್ದಾರೆ.
PC- Google
8- ವಿರಾಟ್ ಕೊಹ್ಲಿ
ಟಿ20 ವಿಶ್ವಕಪ್ನಲ್ಲಿ 25 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ ಒಟ್ಟು 28 ಸಿಕ್ಸ್ಗಳನ್ನು ಬಾರಿಸಿದ್ದಾರೆ. ಈ ಸಿಕ್ಸ್ಗಳೊಂದಿಗೆ ಸಿಕ್ಸರ್ ಸರದಾರರ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದಾರೆ.
PC- Google
9- ಡ್ವೇನ್ ಬ್ರಾವೊ
ವೆಸ್ಟ್ ಇಂಡೀಸ್ನ ಮಾಜಿ ಆಲ್ರೌಂಡರ್ ಡ್ವೇನ್ ಬ್ರಾವೊ ಟಿ20 ವಿಶ್ವಕಪ್ನಲ್ಲಿ 30 ಇನಿಂಗ್ಸ್ ಆಡಿದ್ದು, ಈ ವೇಳೆ 25 ಸಿಕ್ಸ್ಗಳನ್ನು ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ.
PC- Google
10- ಮಹೇಲ ಜಯವರ್ಧನೆ
ಟಿ20 ವಿಶ್ವಕಪ್ನಲ್ಲಿ 31 ಇನಿಂಗ್ಸ್ ಆಡಿರುವ ಶ್ರೀಲಂಕಾದ ಮಾಜಿ ನಾಯಕ ಮಹೇಲ ಜಯವರ್ಧನೆ ಒಟ್ಟು 25 ಸಿಕ್ಸ್ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟಾಪ್-10 ಸಿಕ್ಸರ್ ಸರದಾರರ ಪಟ್ಟಿಯಲ್ಲಿ ಕೊನೆಯ ಸ್ಥಾನ ಅಲಂಕರಿಸಿದ್ದಾರೆ.