15-12-2023

ಟಿ20ಯಲ್ಲಿ ಅಧಿಕ ಸಿಕ್ಸರ್ ಬಾರಿಸಿರುವ ಬ್ಯಾಟರ್​ಗಳ ಪೈಕಿ ಮೂವರು ಭಾರತೀಯರು

Author: ಪೃಥ್ವಿ ಶಂಕರ

ಅಂತಾರಾಷ್ಟ್ರೀಯ ಟಿ20ಯಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟ್ಸ್‌ಮನ್​ಗಳ ಪೈಕಿ ಭಾರತದ ರೋಹಿತ್ ಶರ್ಮಾ ಮೊದಲ ಸ್ಥಾನದಲ್ಲಿದ್ದಾರೆ. ಅವರು ಇದುವರೆಗೆ 148 ಪಂದ್ಯಗಳಲ್ಲಿ 182 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ನ್ಯೂಜಿಲೆಂಡ್‌ನ ಮಾರ್ಟಿನ್ ಗಫ್ಟಿಲ್ ಎರಡನೇ ಸ್ಥಾನದಲ್ಲಿದ್ದು, 122 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 173 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಮೂರನೇ ಸ್ಥಾನದಲ್ಲಿದರುವ ಆರನ್ ಫಿಂಚ್ ಅಂತಾರಾಷ್ಟ್ರೀಯ ಟಿ20ಯಲ್ಲಿ 103 ಪಂದ್ಯಗಳನ್ನಾಡಿದ್ದು, 125 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ವೆಸ್ಟ್ ಇಂಡೀಸ್‌ನ ಕ್ರಿಸ್ ಗೇಲ್ ನಾಲ್ಕನೇ ಸ್ಥಾನದಲ್ಲಿದ್ದು, 79 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 124 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಭಾರತದ ಸೂರ್ಯಕುಮಾರ್ ಯಾದವ್ ಈಗ ಐದನೇ ಸ್ಥಾನಕ್ಕೆ ಏರಿದ್ದು, ಅವರು ಕೇವಲ 60 ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 123 ಸಿಕ್ಸರ್‌ಗಳನ್ನು ಹೊಡೆದಿದ್ದಾರೆ.

ಐರ್ಲೆಂಡ್‌ನ ಪಾಲ್ ಸ್ಟಾರ್ಲಿಂಗ್ 134 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 123 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಇಂಗ್ಲೆಂಡ್ ನಾಯಕ ಇಯಾನ್ ಮಾರ್ಗನ್ 115 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಒಟ್ಟು 120 ಸಿಕ್ಸರ್ ಬಾರಿಸಿದ್ದಾರೆ.

ಇಂಗ್ಲೆಂಡ್‌ನ ಜೋಸ್ ಬಟ್ಲರ್ 111 ಟಿ20 ಪಂದ್ಯಗಳಲ್ಲಿ ಇದುವರೆಗೆ 118 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ವಿರಾಟ್ ಕೊಹ್ಲಿ ಇಲ್ಲಿಯವರೆಗೆ 115 ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಅವರ ಹೆಸರಿನಲ್ಲಿ 117 ಸಿಕ್ಸರ್‌ಗಳು ದಾಖಲಾಗಿವೆ

100 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಗ್ಲೆನ್ ಮ್ಯಾಕ್ಸ್‌ವೆಲ್ 115 ಸಿಕ್ಸರ್‌ಗಳನ್ನು ಹೊಡೆದಿದ್ದಾರೆ.