08-01-2024

T20I ನಲ್ಲಿ ಅಧಿಕ ಸಿಕ್ಸರ್ ಬಾರಿಸಿದ ಬ್ಯಾಟರ್ ಯಾರು ಗೊತ್ತಾ?

Author: ಪೃಥ್ವಿ ಶಂಕರ

ಇದುವರೆಗೆ ಆಡಿರುವ 148 ಪಂದ್ಯಗಳಲ್ಲಿ 182 ಸಿಕ್ಸರ್‌ ಬಾರಿಸಿರುವ ರೋಹಿತ್ ಶರ್ಮಾ ಹೆಸರಿನಲ್ಲಿ ಅಂತಾರಾಷ್ಟ್ರೀಯ ಟಿ20ಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ ಇದೆ.

ಎರಡನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್‌ನ ಮಾರ್ಟಿನ್ ಗಪ್ಟಿಲ್ ಆಡಿರುವ 122 ಪಂದ್ಯಗಳಲ್ಲಿ 173 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಮೂರನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾದ ಆ್ಯರೋನ್ ಫಿಂಚ್ 103 ಪಂದ್ಯಗಳಲ್ಲಿ 125 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ನಾಲ್ಕನೇ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್‌ನ ಕ್ರಿಸ್ ಗೇಲ್ ಕೇವಲ 79 ಪಂದ್ಯಗಳಲ್ಲಿ 124 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

60 ಪಂದ್ಯಗಳನ್ನು ಆಡಿರುವ ಭಾರತದ ಸೂರ್ಯಕುಮಾರ್ ಯಾದವ್ ಇದುವರೆಗೆ 123 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಇಂಗ್ಲೆಂಡ್‌ನ ಜೋಸ್ ಬಟ್ಲರ್ ಇದುವರೆಗೆ 114 ಪಂದ್ಯಗಳಲ್ಲಿ 123 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಐರ್ಲೆಂಡ್‌ನ ಪಾಲ್ ಸ್ಟಾರ್ಲಿಂಗ್ ಇದುವರೆಗೆ 134 ಪಂದ್ಯಗಳನ್ನು ಆಡಿದ್ದು, 123 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಇಂಗ್ಲೆಂಡ್‌ನ ಇಯಾನ್ ಮಾರ್ಗನ್ 115 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 120 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಭಾರತದ ವಿರಾಟ್ ಕೊಹ್ಲಿ ಇದುವರೆಗೆ 115 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, 117 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್‌ವೆಲ್ ಇದುವರೆಗೆ 100 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಒಟ್ಟು 115 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.