11-05-2024

ಅಧಿಕ ಸಿಕ್ಸರ್; ಈ ಸಾಧನೆ ಮಾಡಿದ ಮೂರನೇ ಭಾರತೀಯ ಧೋನಿ..!

Author: ಪೃಥ್ವಿ ಶಂಕರ

ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮಹತ್ವದ ಸಾಧನೆ ಮಾಡಿದ್ದಾರೆ.

ಗುಜರಾತ್ ವಿರುದ್ಧ, ಧೋನಿ 11 ಎಸೆತಗಳಲ್ಲಿ ಒಂದು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳ ಸಹಾಯದಿಂದ ಅಜೇಯ 26 ರನ್‌ಗಳನ್ನು ಗಳಿಸಿದರು.

ಈ ಪಂದ್ಯದಲ್ಲಿ ಸಿಎಸ್‌ಕೆ ಸೋಲನುಭವಿಸಬೇಕಾಗಿ ಬಂದರೂ, ಐಪಿಎಲ್‌ನಲ್ಲಿ ಧೋನಿ ಮತ್ತೊಂದು ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡರು.

ಗುಜರಾತ್ ವಿರುದ್ಧ 3 ಸಿಕ್ಸರ್ ಬಾರಿಸಿದ ಧೋನಿ ಐಪಿಎಲ್‌ನಲ್ಲಿ 250 ಸಿಕ್ಸರ್‌ಗಳನ್ನು ಪೂರೈಸಿದ್ದಾರೆ. ಈ ಮೂಲಕ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದವರ ಪಟ್ಟಿಯಲ್ಲಿ ಎಬಿ ಡಿವಿಲಿಯರ್ಸ್‌ ದಾಖಲೆಯನ್ನು ಸರಿಗಟ್ಟಿದ್ದಾರೆ.

ಹಾಗೆಯೇ ಐಪಿಎಲ್‌ನಲ್ಲಿ 250ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಮೂರನೇ ಭಾರತೀಯ ಎಂಬ ಹೆಗ್ಗಳಿಕೆಗೆ ಧೋನಿ ಪಾತ್ರರಾಗಿದ್ದಾರೆ.

ಇದಕ್ಕೂ ಮುನ್ನ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೂಡ ಈ ಸಾಧನೆ ಮಾಡಿದ್ದರು.

ಐಪಿಎಲ್‌ನಲ್ಲಿ 276 ಸಿಕ್ಸರ್‌ಗಳನ್ನು ಬಾರಿಸಿರುವ ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ಪ್ರಸ್ತುತ ಎರಡನೇ ಸ್ಥಾನದಲ್ಲಿರುವ ಆರ್‌ಸಿಬಿ ಪರ ಆಡುತ್ತಿರುವ ವಿರಾಟ್ ಕೊಹ್ಲಿ ಇದುವರೆಗೆ 264 ಸಿಕ್ಸರ್‌ ಸಿಡಿಸಿ 2ನೇ ಸ್ಥಾನದಲ್ಲಿದ್ದಾರೆ.

ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ 357 ಸಿಕ್ಸರ್‌ಗಳನ್ನು ಬಾರಿಸಿರುವ ಕ್ರಿಸ್ ಗೇಲ್ ಹೆಸರಿನಲ್ಲಿದೆ.