19-10-2023

ಪಾಯಿಂಟ್ ಟೇಬಲ್​ನಲ್ಲಿ ಕುಸಿದ ಭಾರತ: ಕಿವೀಸ್ ಟಾಪ್

ಪಾಯಿಂಟ್ಸ್ ಟೇಬಲ್

ಬುಧವಾರ ಅಫ್ಘಾನಿಸ್ತಾನ ವಿರುದ್ಧ ನ್ಯೂಝಿಲೆಂಡ್ ಗೆದ್ದ ಬಳಿಕ ಪಾಯಿಂಟ್ಸ್ ಟೇಬಲ್'ನಲ್ಲಿ ಬದಲಾವಣೆ ಆಗಿದ್ದು, ಕಿವೀಸ್ ಪಡೆ ಅಗ್ರಸ್ಥಾನಕ್ಕೇರಿದೆ.

ನ್ಯೂಝಿಲೆಂಡ್

ನ್ಯೂಝಿಲೆಂಡ್ ಆಡಿರುವ ನಾಲ್ಕು ಪಂದ್ಯಗಳ ಪೈಕಿ ನಾಲ್ಕರಲ್ಲೂ ಗೆದ್ದು ಎಂಟು ಅಂಕ ಸಂಪಾದಿಸಿ ಭರ್ಜರಿ ರನ್​ರೇಟ್​ನೊಂದಿಗೆ ಮೊದಲ ಸ್ಥಾನದಲ್ಲಿದೆ.

ಭಾರತ

ಟೀಮ್ ಇಂಡಿಯಾ ಆಡಿರುವ ಮೂರು ಪಂದ್ಯಗಳ ಪೈಕಿ ಮೂರರಲ್ಲೂ ಗೆದ್ದು ಆರು ಅಂಕ ಸಂಪಾದಿಸಿ ಎರಡನೇ ಸ್ಥಾನದಲ್ಲಿದೆ.

ದ. ಆಫ್ರಿಕಾ

ದಕ್ಷಿಣ ಆಫ್ರಿಕಾ ತಂಡ ಆಡಿರುವ ಮೂರು ಪಂದ್ಯಗಳ ಪೈಕಿ ಎರಡಲ್ಲೂ ಗೆದ್ದು ನಾಲ್ಕು ಅಂಕ ಸಂಪಾದಿಸಿ ಮೂರನೇ ಸ್ಥಾನದಲ್ಲಿದೆ.

ಪಾಕಿಸ್ತಾನ

ಪಾಕಿಸ್ತಾನ ತಂಡ ಆಡಿರುವ ಮೂರು ಪಂದ್ಯಗಳ ಪೈಕಿ ಎರಡರಲ್ಲಿ ಗೆದ್ದು ನಾಲ್ಕು ಅಂಕ ಸಂಪಾದಿಸಿ ನಾಲ್ಕನೇ ಸ್ಥಾನದಲ್ಲಿದೆ.

ಇಂಗ್ಲೆಂಡ್

ಇಂಗ್ಲೆಂಡ್ ತಂಡ ಆಡಿರುವ ಮೂರು ಪಂದ್ಯಗಳ ಪೈಕಿ ಒಂದರಲ್ಲಿ ಗೆಲುವು ಎರಡರಲ್ಲಿ ಸೋಲು ಕಂಡು 2 ಅಂಕ ಸಂಪಾದಿಸಿ ಐದನೇ ಸ್ಥಾನದಲ್ಲಿದೆ.

ಬಾಂಗ್ಲಾದೇಶ

ಬಾಂಗ್ಲಾದೇಶ ತಂಡ ಆಡಿರುವ ಮೂರು ಪಂದ್ಯಗಳ ಪೈಕಿ ಎರಡರಲ್ಲಿ ಸೋಲು, ಒಂದರಲ್ಲಿ ಗೆದ್ದು ಎರಡು ಅಂಕ ಸಂಪಾದಿಸಿ ಆರನೇ ಸ್ಥಾನದಲ್ಲಿದೆ.

ಆಸ್ಟ್ರೇಲಿಯಾ

ಆಸ್ಟ್ರೇಲಿಯಾ ತಂಡ ಆಡಿರುವ ಮೂರು ಪಂದ್ಯಗಳ ಪೈಕಿ ಒಂದರಲ್ಲಿ ಗೆದ್ದು, ಎರಡರಲ್ಲಿ ಸೋಲುಂಡು 2 ಅಂಕ ಸಂಪಾದಿಸಿ ಏಳನೇ ಸ್ಥಾನದಲ್ಲಿದೆ.

ನೆದರ್ಲೆಂಡ್ಸ್

ನೆದರ್ಲೆಂಡ್ಸ್ ತಂಡ ಆಡಿರುವ ಮೂರು ಪಂದ್ಯಗಳ ಪೈಕಿ ಒಂದರಲ್ಲಿ ಗೆದ್ದು ಎರಡು ಅಂಕ ಸಂಪಾದಿಸಿ ಎಂಟನೇ ಸ್ಥಾನದಲ್ಲಿದೆ.

ಅಫ್ಘಾನಿಸ್ತಾನ

ಅಫ್ಘಾನಿಸ್ತಾನ ತಂಡ ಆಡಿರುವ ನಾಲ್ಕು ಪಂದ್ಯಗಳ ಪೈಕಿ ಕೇವಲ ಒಂದರಲ್ಲಿ ಗೆದ್ದು ಮೂರರಲ್ಲಿ ಸೋತು 2 ಅಂಕ ಸಂಪಾದಿಸಿ ಒಂತ್ತನೇ ಸ್ಥಾನದಲ್ಲಿದೆ.

ಶ್ರೀಲಂಕಾ

ಶ್ರೀಲಂಕಾ ತಂಡ ಆಡಿರುವ 3 ಪಂದ್ಯಗಳ ಪೈಕಿ ಮೂರರಲ್ಲೂ ಸೋತು ಖಾತೆ ತೆರೆಯದೆ ಹತ್ತನೇ ಸ್ಥಾನದಲ್ಲಿದೆ.

ಸಚಿನ್ ವಿಶ್ವದಾಖಲೆ ಮುರಿಯಲು ಸಜ್ಜಾದ ಕಿಂಗ್ ಕೊಹ್ಲಿ