19-12-2023

ಐಪಿಎಲ್‌ನಲ್ಲಿ ಒಂದೇ ತಂಡದ ಪರ ಆಡಿರುವ ಕ್ರಿಕೆಟಿಗರಿವರು

Author: ಪೃಥ್ವಿ ಶಂಕರ

ವಿರಾಟ್ ಕೊಹ್ಲಿ ಐಪಿಎಲ್ ಮೊದಲ ಸೀಸನ್‌ನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿದ್ದಾರೆ.

ಕೀರನ್ ಪೊಲಾರ್ಡ್ ತಮ್ಮ ಇಡೀ ಐಪಿಎಲ್ ವೃತ್ತಿಜೀವನದಲ್ಲಿ ಮುಂಬೈ ಇಂಡಿಯನ್ಸ್ ಪರ ಮಾತ್ರ ಆಡಿದ್ದರು.

ಸುನಿಲ್ ನರೈನ್ 2012 ರಿಂದ ಐಪಿಎಲ್ ಆಡುತ್ತಿದ್ದು, ಅವರು ಇದುವರೆಗೆ ಕೋಲ್ಕತ್ತಾ ನೈಟ್ ರೈಡರ್ಸ್‌ ಪರ ಮಾತ್ರ ಆಡಿದ್ದಾರೆ.

2013 ರಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ಜಸ್ಪ್ರೀತ್ ಬುಮ್ರಾ ಅಂದಿನಿಂದ ಮುಂಬೈ ಇಂಡಿಯನ್ಸ್ ಪರ ಆಡುತ್ತಿದ್ದಾರೆ.

ಲಸಿತ್ ಮಾಲಿಂಗ ಕೂಡ ತಮ್ಮ ಇಡೀ ಐಪಿಎಲ್ ವೃತ್ತಿಜೀವನದಲ್ಲಿ ಮುಂಬೈ ಇಂಡಿಯನ್ಸ್ ಪರ ಮಾತ್ರ ಆಡಿದ್ದರು.

2016 ರಲ್ಲಿ ಐಪಿಎಲ್ ವೃತ್ತಿಜೀವನ ಪ್ರಾರಂಭಿಸಿದ ರಿಷಬ್ ಪಂತ್, ಅಂದಿನಿಂದ ದೆಹಲಿ ಕ್ಯಾಪಿಟಲ್ಸ್‌ ತಂಡದ ಭಾಗವಾಗಿದ್ದಾರೆ.

ಸಚಿನ್ ತೆಂಡೂಲ್ಕರ್ ತಮ್ಮ ಐಪಿಎಲ್ ವೃತ್ತಿಜೀವನದುದ್ದಕ್ಕೂ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿದ್ದರು.

ಮೊದಲ ಐಪಿಎಲ್ ಪ್ರಶಸ್ತಿ ಗೆದ್ದ ಶೇನ್ ವಾರ್ನ್ ಕೂಡ ರಾಜಸ್ಥಾನ್ ರಾಯಲ್ಸ್ ಪರ ಮಾತ್ರ ಆಡಿದ್ದರು.

ಶಾನ್ ಮಾರ್ಷ್ ಕೂಡ ತನ್ನ ಸಂಪೂರ್ಣ ಐಪಿಎಲ್ ವೃತ್ತಿಜೀವನದಲ್ಲಿ ಪಂಜಾಬ್ ಕಿಂಗ್ಸ್‌ ಪರ ಮಾತ್ರ ಆಡಿದರು.