10-01-2024

ಅಫ್ಘಾನ್ ವಿರುದ್ಧ 6 ದಾಖಲೆ ನಿರ್ಮಿಸಲು ಸಜ್ಜಾದ ರೋಹಿತ್ ಶರ್ಮಾ..!

Author: ಪೃಥ್ವಿ ಶಂಕರ

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ 3 ಪಂದ್ಯಗಳ ಟಿ20 ಸರಣಿ ಜನವರಿ 11 ರಿಂದ ಆರಂಭವಾಗುತ್ತಿದೆ.

ಈ ಸರಣಿಯೊಂದಿಗೆ ರೋಹಿತ್ ಶರ್ಮಾ ಬರೋಬ್ಬರಿ 14 ತಿಂಗಳ ನಂತರ ಈ ಚುಟುಕು ಮಾದರಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದರೊಂದಿಗೆ ಈ ರೋಹಿತ್ ಟಿ20 ಕ್ರಿಕೆಟ್​ನಲ್ಲಿ ಬರೋಬ್ಬರಿ 6 ದಾಖಲೆಗಳನ್ನು ಸೃಷ್ಟಿಸುವ ಅವಕಾಶ ಹೊಂದಿದ್ದಾರೆ.

ಈ ಟಿ20 ಸರಣಿಯಲ್ಲಿ 44 ರನ್ ಬಾರಿಸಿದರೆ ರೋಹಿತ್ ಅಂತಾರಾಷ್ಟ್ರೀಯ ಟಿ20ಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ನಾಯಕನಾಗಲಿದ್ದಾರೆ.

ಹಾಗೆಯೇ ಈ ಸರಣಿಯಲ್ಲಿ 18 ಸಿಕ್ಸರ್‌ಗಳನ್ನು ಹೊಡೆದರೆ ಅಂತಾರಾಷ್ಟ್ರೀಯ ಟಿ20ಯಲ್ಲಿ 200 ಸಿಕ್ಸರ್‌ಗಳನ್ನು ಪೂರೈಸಿದ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲಿದ್ದಾರೆ.

ಅಂತರಾಷ್ಟ್ರೀಯ ಟಿ20ಯಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ನಾಯಕ ಎನಿಸಿಕೊಳ್ಳಲು ರೋಹಿತ್ ಕೇವಲ 5 ಹೆಜ್ಜೆಗಳ ದೂರದಲ್ಲಿದ್ದಾರೆ.

ಈ ಟಿ20 ಸರಣಿಯ ಎಲ್ಲಾ ಮೂರು ಪಂದ್ಯಗಳನ್ನು ಗೆದ್ದರೆ, ರೋಹಿತ್ ಗರಿಷ್ಠ 42 ಗೆಲುವಿನ ವಿಶ್ವ ದಾಖಲೆಯನ್ನು ಸರಿಗಟ್ಟಲಿದ್ದಾರೆ. ಪ್ರಸ್ತುತ, ರೋಹಿತ್ ನಾಯಕನಾಗಿ 39 ಪಂದ್ಯಗಳನ್ನು ಗೆದ್ದಿದ್ದಾರೆ.

ಹಾಗೆಯೇ ಅಂತಾರಾಷ್ಟ್ರೀಯ ಟಿ20ಯಲ್ಲಿ 4000 ರನ್ ಗಳಿಸಿದ ಎರಡನೇ ಬ್ಯಾಟ್ಸ್‌ಮನ್ ಆಗುವ ಅವಕಾಶ ರೋಹಿತ್ ಶರ್ಮಾಗೆ ಇದೆ.

ಹಾಗೆಯೇ ಅಂತಾರಾಷ್ಟ್ರೀಯ ಟಿ20ಯಲ್ಲಿ 4000 ರನ್ ಗಳಿಸಿದ ಎರಡನೇ ಬ್ಯಾಟ್ಸ್‌ಮನ್ ಆಗುವ ಅವಕಾಶ ರೋಹಿತ್ ಶರ್ಮಾಗೆ ಇದೆ.