12-10-2023
ರೋಹಿತ್ ಶರ್ಮಾ: ಒಂದಲ್ಲ ಎರಡಲ್ಲ ಬರೋಬ್ಬರಿ 10 ದಾಖಲೆ
ವೇಗದ ಶತಕ
ಏಕದಿನ ವಿಶ್ವಕಪ್'ನಲ್ಲಿ 63 ಎಸೆತಗಳಲ್ಲಿ ಶತಕ ಪೂರೈಸಿ ಅತೀ ವೇಗದ ಶತಕ ಸಿಡಿಸಿದ ಭಾರತೀಯ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ.
ವಿಶ್ವಕಪ್ 7 ಶತಕ
ಏಕದಿನ ವಿಶ್ವಕಪ್ನಲ್ಲಿ ಅತ್ಯಧಿಕ ಶತಕ ಸಿಡಿಸಿದ ವಿಶ್ವ ದಾಖಲೆ ರೋಹಿತ್ ಶರ್ಮಾ ಪಾಲಾಗಿದೆ. ಇದಕ್ಕೂ ಮುನ್ನ ದಾಖಲೆ ಸಚಿನ್ (6 ಶತಕ) ಹೆಸರಿನಲ್ಲಿತ್ತು.
ಆರಂಭಿಕನ ದಾಖಲೆ
ಏಕದಿನ ಕ್ರಿಕೆಟ್ನಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಅತ್ಯಧಿಕ ಶತಕ ಸಿಡಿಸಿದ ವಿಶ್ವದ 2ನೇ ಬ್ಯಾಟರ್ ಎಂಬ ದಾಖಲೆ ರೋಹಿತ್ ಶರ್ಮಾ ಪಾಲಾಗಿದೆ.
ಭಾರತೀಯ ಶತಕವೀರ
ಏಕದಿನ ಕ್ರಿಕೆಟ್ನಲ್ಲಿ ವೇಗದ ಶತಕ ಸಿಡಿಸಿದ ಐದನೇ ಭಾರತೀಯ ಎಂಬ ಹಿರಿಮೆಗೂ ಹಿಟ್ಮ್ಯಾನ್ ಪಾತ್ರರಾಗಿದ್ದಾರೆ.
31ನೇ ಶತಕ
ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ಶತಕ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಇದೀಗ ರೋಹಿತ್ ಶರ್ಮಾ 3ನೇ ಸ್ಥಾನಕ್ಕೇರಿದ್ದಾರೆ. ಸಚಿನ್ (49) ಅಗ್ರಸ್ಥಾನದಲ್ಲಿದ್ದರೆ.
ಕಡಿಮೆ ಇನಿಂಗ್ಸ್ನಲ್ಲಿ ಶತಕ
ಏಕದಿನ ವಿಶ್ವಕಪ್ ಇತಿಹಾಸದಲ್ಲೇ ಅತಿ ಕಡಿಮೆ ಇನಿಂಗ್ಸ್ಗಳಲ್ಲಿ ಅತ್ಯಧಿಕ ಶತಕ ಸಿಡಿಸಿದ ವಿಶೇಷ ದಾಖಲೆ ಕೂಡ ರೋಹಿತ್ ಶರ್ಮಾ ಪಾಲಾಗಿದೆ.
ಸಿಕ್ಸರ್ಗಳ ಸರದಾರ
ಏಕದಿನ ಕ್ರಿಕೆಟ್ನಲ್ಲಿ ನಾಲ್ಕು ವರ್ಷಗಳಲ್ಲಿ 50 ಕ್ಕಿಂತ ಹೆಚ್ಚು ಸಿಕ್ಸರ್ ಸಿಡಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ದಾಖಲೆ ರೋಹಿತ್ ಶರ್ಮಾ ಪಾಲಾಗಿದೆ.
ವೇಗದ 1000 ರನ್
ಏಕದಿನ ವಿಶ್ವಕಪ್ನಲ್ಲಿ ಅತೀ ವೇಗವಾಗಿ ಸಾವಿರ ರನ್ ಪೂರೈಸಿದ ವಿಶೇಷ ದಾಖಲೆಯನ್ನೂ ಕೂಡ ರೋಹಿತ್ ಶರ್ಮಾ ನಿರ್ಮಿಸಿದ್ದಾರೆ (19 ಇನಿಂಗ್ಸ್ಗಳಲ್ಲಿ).
ಹಿಟ್ಮ್ಯಾನ್ ಪವರ್
ಏಕದಿನ ಕ್ರಿಕೆಟ್ನ ಪವರ್ಪ್ಲೇನಲ್ಲಿ ಅತ್ಯಧಿಕ ರನ್ ಬಾರಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ರೋಹಿತ್ ಶರ್ಮಾ ಹೆಸರಿಗೆ ಸೇರ್ಪಡೆಯಾಗಿದೆ.
5 ಭರ್ಜರಿ ಸಿಕ್ಸ್
ಈ ಪಂದ್ಯದಲ್ಲಿ 5 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ವಿಶ್ವ ದಾಖಲೆಯನ್ನು ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ.
ಶುಭ್ಮನ್ ಗಿಲ್ ಆಸ್ಪತ್ರೆಗೆ ದಾಖಲು
ಇನ್ನಷ್ಟು ಓದಿ