ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ಟೆಸ್ಟ್ ತಂಡಕ್ಕೆ ಪದಾರ್ಪಣೆ ಮಾಡಿರುವ ಭಾರತದ ಬ್ಯಾಟ್ಸ್‌ಮನ್ ಸರ್ಫರಾಜ್ ಖಾನ್ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.
Pic credit: Google
ಮುಂಬರುವ ಬಾಂಗ್ಲಾದೇಶ ಸರಣಿಯಲ್ಲಿ ನಾನು ತಂಡದಲ್ಲಿ ಆಯ್ಕೆಯಾಗುತ್ತೇನೆ ಎಂಬ ಯಾವ ಭರವಸೆಯೂ ನನಗಿಲ್ಲ ಎಂದು ಸರ್ಫರಾಜ್ ಖಾನ್ ಹೇಳಿದ್ದಾರೆ.
Pic credit: Google
ಸರ್ಫರಾಜ್ ಖಾನ್ ಹೇಳಿರುವಂತೆ ಟೀಂ ಇಂಡಿಯಾದಲ್ಲಿ ಅವರ ಆಯ್ಕೆ ಕಷ್ಟ. ಏಕೆಂದರೆ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್ ಅವರಂತಹ ಆಟಗಾರರು ಟೆಸ್ಟ್ ತಂಡದಲ್ಲಿ ಪುನರಾಗಮನ ಮಾಡುವ ಸಾಧ್ಯತೆಗಳಿವೆ.
Pic credit: Google
ಇಂಗ್ಲೆಂಡ್ ವಿರುದ್ಧದ 3 ಟೆಸ್ಟ್ ಪಂದ್ಯಗಳಲ್ಲಿ ಸರ್ಫರಾಜ್ ಖಾನ್ 50ಕ್ಕೂ ಹೆಚ್ಚು ಸರಾಸರಿಯಲ್ಲಿ 200 ರನ್ ಗಳಿಸಿದ್ದರು. ಇದರಲ್ಲಿ 3 ಅರ್ಧಶತಕಗಳು ಸೇರಿದ್ದವು.
Pic credit: Google
ಪ್ರಸ್ತುತ ವಿಶ್ರಾಂತಿಯಲ್ಲಿರುವ ಟೀಂ ಇಂಡಿಯಾ ಮುಂದಿನ ತಿಂಗಳು ಬಾಂಗ್ಲಾದೇಶದ ವಿರುದ್ಧ ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಬೇಕಾಗಿದೆ. ಈ ಸರಣಿಗಾಗಿ ತಂಡವನ್ನು ಮುಂದಿನ ತಿಂಗಳ ಆರಂಭದಲ್ಲಿ ಆಯ್ಕೆ ಮಾಡಬಹುದು.
Pic credit: Google
ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಸೆಪ್ಟೆಂಬರ್ 19 ರಂದು ಚೆನ್ನೈನಲ್ಲಿ ಮತ್ತು ಎರಡನೇ ಟೆಸ್ಟ್ ಸೆಪ್ಟೆಂಬರ್ 27 ರಿಂದ ಕಾನ್ಪುರದಲ್ಲಿ ನಡೆಯಲಿದೆ.
Pic credit: Google
ಮತ್ತೊಮ್ಮೆ ಟೀಂ ಇಂಡಿಯಾದಲ್ಲಿ ಅವಕಾಶ ಪಡೆಯಲು ಕಸರತ್ತು ನಡೆಸುತ್ತಿರುವ ಸರ್ಫರಾಜ್ ಬುಚ್ಚಿ ಬಾಬು ಟೂರ್ನಿಯಲ್ಲಿ ಮುಂಬೈ ತಂಡದ ನಾಯಕರಾಗಿದ್ದಾರೆ. ಈ ಟೂರ್ನಿಯಲ್ಲಿ ಸರ್ಫರಾಜ್ ರನ್ ಗಳಿಸಿದರೆ ಅವರನ್ನು ಟೆಸ್ಟ್ ತಂಡಕ್ಕೆ ಆಯ್ಕೆ ಮಾಡುವ ಸಾಧ್ಯತೆಗಳಿವೆ.