ಈ ವಿಚಾರದಲ್ಲಿ ಕಿಂಗ್ ಕೊಹ್ಲಿ ದಾಖಲೆ ಸರಿಗಟ್ಟಿದ ಸೂರ್ಯ

21-06-2024

ಈ ವಿಚಾರದಲ್ಲಿ ಕಿಂಗ್ ಕೊಹ್ಲಿ ದಾಖಲೆ ಸರಿಗಟ್ಟಿದ ಸೂರ್ಯ

Author: ಪೃಥ್ವಿ ಶಂಕರ

TV9 Kannada Logo For Webstory First Slide
ಗುರುವಾರ ನಡೆದ ಸೂಪರ್-8 ಪಂದ್ಯದಲ್ಲಿ ಭಾರತ 47 ರನ್‌ಗಳಿಂದ ಅಫ್ಘಾನಿಸ್ತಾನವನ್ನು ಸೋಲಿಸಿತು. ಈ ಮೂಲಕ ಟಿ20 ವಿಶ್ವಕಪ್‌ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿತು.

ಗುರುವಾರ ನಡೆದ ಸೂಪರ್-8 ಪಂದ್ಯದಲ್ಲಿ ಭಾರತ 47 ರನ್‌ಗಳಿಂದ ಅಫ್ಘಾನಿಸ್ತಾನವನ್ನು ಸೋಲಿಸಿತು. ಈ ಮೂಲಕ ಟಿ20 ವಿಶ್ವಕಪ್‌ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿತು.

ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಸೂರ್ಯಕುಮಾರ್ ಯಾದವ್ 28 ಎಸೆತಗಳಲ್ಲಿ 5 ಬೌಂಡರಿ ಹಾಗೂ 3 ಸಿಕ್ಸರ್‌ಗಳ ನೆರವಿನಿಂದ 53 ರನ್ ಗಳಿಸಿದರು ಈ ಮೂಲಕ ಪಂದ್ಯ ಶ್ರೇಷ್ಠರಾಗಿಯೂ ಆಯ್ಕೆಯಾದರು.

ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಸೂರ್ಯಕುಮಾರ್ ಯಾದವ್ 28 ಎಸೆತಗಳಲ್ಲಿ 5 ಬೌಂಡರಿ ಹಾಗೂ 3 ಸಿಕ್ಸರ್‌ಗಳ ನೆರವಿನಿಂದ 53 ರನ್ ಗಳಿಸಿದರು ಈ ಮೂಲಕ ಪಂದ್ಯ ಶ್ರೇಷ್ಠರಾಗಿಯೂ ಆಯ್ಕೆಯಾದರು.

ಇದರೊಂದಿಗೆ ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಅಧಿಕ ಬಾರಿ ಈ ಪ್ರಶಸ್ತಿ ಗೆದ್ದ ಭಾರತದ ಆಟಗಾರರ ಪೈಕಿ ವಿರಾಟ್ ಕೊಹ್ಲಿಯನ್ನು ಸರಿಗಟ್ಟಿದರು.

ಇದರೊಂದಿಗೆ ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಅಧಿಕ ಬಾರಿ ಈ ಪ್ರಶಸ್ತಿ ಗೆದ್ದ ಭಾರತದ ಆಟಗಾರರ ಪೈಕಿ ವಿರಾಟ್ ಕೊಹ್ಲಿಯನ್ನು ಸರಿಗಟ್ಟಿದರು.

ಇನ್ನು ಅಂತರಾಷ್ಟ್ರೀಯ ಟಿ20ಯಲ್ಲಿ ಅತಿ ಹೆಚ್ಚು ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಗೆದ್ದ ಆಟಗಾರರು ಯಾರು ಎಂಬುದನ್ನು ನೋಡುವುದಾದರೆ..

ಅಫ್ಘಾನ್ ವಿರುದ್ಧದ ಪಂದ್ಯದಲ್ಲಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಗೆಲ್ಲುವ ಮೂಲಕ ಸೂರ್ಯಕುಮಾರ್ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ಇದುವರೆಗೆ ಸೂರ್ಯ ಆಡಿರುವ 64 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 15 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದಿದ್ದಾರೆ.

ವಿರಾಟ್ ಕೊಹ್ಲಿ 121 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 15 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದಿದ್ದು, ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

ಮಲೇಷ್ಯಾದ ವೀರನ್‌ದೀಪ್ ಸಿಂಗ್ 78 ಪಂದ್ಯಗಳಲ್ಲಿ 14 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದಿದ್ದು, ಮೂರನೇ ಸ್ಥಾನದಲ್ಲಿದ್ದಾರೆ.

ನಾಲ್ಕನೇ ಸ್ಥಾನದಲ್ಲಿರುವ ಅಫ್ಘಾನಿಸ್ತಾನದ ಮೊಹಮ್ಮದ್ ನಬಿ 126 ಪಂದ್ಯಗಳಲ್ಲಿ 14 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದಿದ್ದಾರೆ.

ಜಿಂಬಾಬ್ವೆಯ ಸಿಕಂದರ್ ರಜಾ 86 ಪಂದ್ಯಗಳಲ್ಲಿ 14 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

8 ಕೋಟಿ ಮೌಲ್ಯದ ಕಾರು ಎಲ್ಲಿಂದ ಬಂತು? ಬಾಬರ್ ಆಝಂ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ!