24-04-2024

ಐಸಿಸಿ ಟಿ20 ರ‍್ಯಾಂಕಿಂಗ್ ಪ್ರಕಟ; ಅಗ್ರಸ್ಥಾನದಲ್ಲಿ ಸೂರ್ಯ..!

Author: ಪೃಥ್ವಿ ಶಂಕರ

ಇಂದು ಐಸಿಸಿ ತನ್ನ ನೂತನ ಟಿ20 ರ‍್ಯಾಂಕಿಂಗ್ ಪಟ್ಟಿ ಪ್ರಕಟಿಸಿದ್ದು, ಇದರಲ್ಲಿ 861 ರೇಟಿಂಗ್​ನೊಂದಿಗೆ ಭಾರತದ ಸೂರ್ಯಕುಮಾರ್ ಯಾದವ್ ಮೊದಲ ಸ್ಥಾನದಲ್ಲಿದ್ದಾರೆ.

802 ರೇಟಿಂಗ್​ನೊಂದಿಗೆ ಇಂಗ್ಲೆಂಡ್​ನ ಫಿಲ್ ಸಾಲ್ಟ್ ಸದ್ಯ ಎರಡನೇ ಸ್ಥಾನದಲ್ಲಿದ್ದಾರೆ.

800 ರೇಟಿಂಗ್​ನೊಂದಿಗೆ ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಮೂರನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ದಕ್ಷಿಣ ಆಫ್ರಿಕಾದ ಏಡೆನ್ ಮಾರ್ಕ್ರಾಮ್ ಒಂದು ಸ್ಥಾನ ಮೇಲೇರಿದ್ದು, 755 ರೇಟಿಂಗ್‌ನೊಂದಿಗೆ 4 ನೇ ಸ್ಥಾನದಲ್ಲಿದ್ದಾರೆ.

ಒಂದು ಸ್ಥಾನ ಕಳೆದುಕೊಂಡಿರುವ ಪಾಕ್ ನಾಯಕ ಬಾಬರ್ ಆಝಂ 753 ರೇಟಿಂಗ್‌ನೊಂದಿಗೆ ಐದನೇ ಸ್ಥಾನಕ್ಕೆ ಕುಸಿದಿದ್ದಾರೆ.

ಭಾರತದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 714 ರೇಟಿಂಗ್‌ನೊಂದಿಗೆ ಆರನೇ ಸ್ಥಾನಕ್ಕೇರಿದ್ದಾರೆ.

ದಕ್ಷಿಣ ಆಫ್ರಿಕಾದ ರಿಲೆ ರೂಸೋ 689 ರೇಟಿಂಗ್‌ನೊಂದಿಗೆ ಏಳನೇ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದಾರೆ.

ಇಂಗ್ಲೆಂಡ್‌ನ ಜೋಸ್ ಬಟ್ಲರ್ ಒಂದು ಸ್ಥಾನ ಮೇಲೇರಿದ್ದು 680 ರೇಟಿಂಗ್‌ನೊಂದಿಗೆ ಎಂಟನೇ ಸ್ಥಾನದಲ್ಲಿದ್ದಾರೆ.

ನ್ಯೂಜಿಲೆಂಡ್‌ನ ಫಿನ್ ಅಲೆನ್ 666 ರೇಟಿಂಗ್‌ನೊಂದಿಗೆ ಒಂಬತ್ತನೇ ಸ್ಥಾನದಲ್ಲಿದ್ದಾರೆ.

ದಕ್ಷಿಣ ಆಫ್ರಿಕಾದ ರೀಸ್ ಹೆಂಡ್ರಿಕ್ಸ್ ಪ್ರಸ್ತುತ 660 ರೇಟಿಂಗ್‌ನೊಂದಿಗೆ ಹತ್ತನೇ ಸ್ಥಾನದಲ್ಲಿದ್ದಾರೆ.

NEXT: Happy Birthday Sachin Tendulkar: ಐಪಿಎಲ್​ನಿಂದ ಕ್ರಿಕೆಟ್ ದೇವರು ಸಂಪಾದಿಸಿದೆಷ್ಟು?