ಮ್ಯಾಕ್ಸ್‌ವೆಲ್ ದಾಖಲೆ ಮೇಲೆ ಸೂರ್ಯನ ಕಣ್ಣು: ಇಂದೇ ಆಗುತ್ತಾ ಈ ರೆಕಾರ್ಡ್?

01 December 2023

Author: Vinay Bhat

ರಾಯ್'ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ಭಾರತ-ಆಸ್ಟ್ರೇಲಿಯಾ ನಡುವೆ ನಾಲ್ಕನೇ ಟಿ20 ಪಂದ್ಯ ನಡೆಯಲಿದೆ.

ಭಾರತ-ಆಸ್ಟ್ರೇಲಿಯಾ

ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ನೂತನ ದಾಖಲೆಯ ಹೊಸ್ತಿಲಲ್ಲಿದ್ದಾರೆ.

ಸೂರ್ಯಕುಮಾರ್ ಯಾದವ್

ನಾಲ್ಕನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ದಾಖಲೆ ಮುರಿಯುವ ಅವಕಾಶ ಸೂರ್ಯಕುಮಾರ್'ಗಿದೆ.

ಮ್ಯಾಕ್ಸಿ ದಾಖಲೆ

ಸೂರ್ಯಕುಮಾರ್ ಯಾದವ್ ಇಂದಿನ ಪಂದ್ಯದಲ್ಲಿ ಕೇವಲ ನಾಲ್ಕು ಸಿಕ್ಸರ್‌ಗಳನ್ನು ಬಾರಿಸದರೆ ಗ್ಲೆನ್ ಮ್ಯಾಕ್ಸ್‌ವೆಲ್ ದಾಖಲೆಯನ್ನು ಪುಡಿಗಟ್ಟಲಿದ್ದಾರೆ.

4 ಸಿಕ್ಸರ್

ಸೂರ್ಯಕುಮಾರ್ ಇದುವರೆಗೆ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಡಿರುವ 56 ಪಂದ್ಯಗಳಲ್ಲಿ 112 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

112 ಸಿಕ್ಸರ್

ಗ್ಲೆನ್ ಮ್ಯಾಕ್ಸ್‌ವೆಲ್ ಅವರು ಈವರೆಗೆ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್'ನಲ್ಲಿ 115 ಸಿಕ್ಸರ್‌ಗಳನ್ನು ಬಾರಿಸಿದ ಸಾಧನೆ ಮಾಡಿದ್ದಾರೆ.

ಮ್ಯಾಕ್ಸಿ ಎಷ್ಟು?

ಸೂರ್ಯಕುಮಾರ್ ಯಾದವ್ ಸದ್ಯ ಭರ್ಜರಿ ಫಾರ್ಮ್'ನಲ್ಲಿದ್ದಾರೆ. ಆಸೀಸ್ ವಿರುದ್ಧ 80 ರನ್, 19 ರನ್ ಮತ್ತು ಮೂರನೇ ಪಂದ್ಯದಲ್ಲಿ 39 ರನ್ ಗಳಿಸಿದ್ದರು.

ಸೂರ್ಯ ಫಾರ್ಮ್

ಭಾರತ-ಆಸ್ಟ್ರೇಲಿಯಾ ನಾಲ್ಕನೇ ಟಿ20 ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7 ಗಂಟೆಗೆ ಶುರುವಾಗಲಿದೆ.

ಪಂದ್ಯ ಎಷ್ಟು ಗಂಟೆಗೆ?