09-06-2024

ಪಾಕ್ ವಿರುದ್ಧದ ಪಂದ್ಯದಲ್ಲಿ ದೊಡ್ಡ ದಾಖಲೆ ಮುರಿಯಲಿದ್ದಾರೆ ಪಾಂಡ್ಯ..!

Author: ಪೃಥ್ವಿ ಶಂಕರ

ಇಂದು, 2024 ರ ಟಿ20 ವಿಶ್ವಕಪ್‌ನ 19 ನೇ ಪಂದ್ಯದಲ್ಲಿ ಭಾರತವು ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸುತ್ತಿದೆ. ಈ ಪಂದ್ಯ ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ.

ಈ ಪಂದ್ಯದಲ್ಲಿ ಟೀಂ ಇಂಡಿಯಾದ ಉಪನಾಯಕ ಹಾರ್ದಿಕ್ ಪಾಂಡ್ಯ ಟಿ20 ವಿಶ್ವಕಪ್​ನಲ್ಲಿ ದೊಡ್ಡ ದಾಖಲೆ ಮುರಿಯುವ ಹೊಸ್ತಿಲಿನಲ್ಲಿದ್ದಾರೆ.

ವಾಸ್ತವವಾಗಿ, ಟಿ20 ವಿಶ್ವಕಪ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ವೇಗದ ಬೌಲರ್ ಆಗಲು ಪಾಂಡ್ಯ ಕೇವಲ ಒಂದು ಹೆಜ್ಜೆ ದೂರದಲ್ಲಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ವೇಗದ ಬೌಲರ್​ಗಳ ಪಟ್ಟಿಯಲ್ಲಿ ಇರ್ಫಾನ್ ಪಠಾಣ್ ಜಂಟಿಯಾಗಿ ಮೊದಲ ಸ್ಥಾನದಲ್ಲಿದ್ದಾರೆ. ಅವರು 14 ಪಂದ್ಯಗಳಲ್ಲಿ 16 ವಿಕೆಟ್ ಪಡೆದಿದ್ದಾರೆ.

ಇದುವರೆಗೆ ಆಡಿರುವ 14 ಪಂದ್ಯಗಳಲ್ಲಿ 16 ವಿಕೆಟ್ ಪಡೆದಿರುವ ಪಾಂಡ್ಯ, ಪಾಕಿಸ್ತಾನ ವಿರುದ್ಧದ 15ನೇ ಟಿ20 ಡಬ್ಲ್ಯುಸಿ ಪಂದ್ಯದಲ್ಲಿ ಇರ್ಫಾನ್ ಪಠಾಣ್ ಅವರನ್ನು ಹಿಂದಿಕ್ಕುವ ಅವಕಾಶ ಹೊಂದಿದ್ದಾರೆ.

ಇದರರ್ಥ, ಪಾಕಿಸ್ತಾನ ವಿರುದ್ಧದ ಮೊದಲ ವಿಕೆಟ್ ಹಾರ್ದಿಕ್ ಪಾಂಡ್ಯರನ್ನು  ಟಿ20 ವಿಶ್ವಕಪ್​ನಲ್ಲಿ ಅತಿ ಹೆಚ್ಚು ವಿಕೆಟ್‌ ಭಾರತೀಯ ವೇಗಿಯನ್ನಾಗಿ ಮಾಡುತ್ತದೆ.

ಇನ್ನು ಟಿ20 ವಿಶ್ವಕಪ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್​ಗಳ ಪಟ್ಟಿಯಲ್ಲಿ ಅಶ್ವಿನ್ ಮೊದಲ ಸ್ಥಾನದಲ್ಲಿದ್ದಾರೆ. ಅವರು ಇದುವರೆಗೆ ಆಡಿರುವ 24 ಪಂದ್ಯಗಳಲ್ಲಿ 32 ವಿಕೆಟ್ ಪಡೆದಿದ್ದಾರೆ.

ಅಶ್ವಿನ್ ನಂತರ ಜಡೇಜಾ 23 ಟಿ20 ವಿಶ್ವಕಪ್ ಪಂದ್ಯಗಳಲ್ಲಿ 21 ವಿಕೆಟ್ ಪಡೆದಿದ್ದಾರೆ. ಹರ್ಭಜನ್ ಸಿಂಗ್ ಪ್ರಸ್ತುತ 18 ಪಂದ್ಯಗಳಲ್ಲಿ 16 ವಿಕೆಟ್‌ಗಳೊಂದಿಗೆ ಮೂರನೇ ಅತ್ಯಂತ ಯಶಸ್ವಿ ಬೌಲರ್ ಆಗಿದ್ದಾರೆ.