01-05-2024

T20 World Cup: ಟಿ20 ವಿಶ್ವಕಪ್‌ ಇತಿಹಾಸದಲ್ಲಿ ಭಾರತದ ಪ್ರದರ್ಶನ ಹೇಗಿದೆ ಗೊತ್ತಾ?

Author: ಪೃಥ್ವಿ ಶಂಕರ

ಟಿ20 ವಿಶ್ವಕಪ್​ನಲ್ಲಿ ಇದುವರೆಗೆ 8 ಆವೃತ್ತಿಗಳು ನಡೆದಿದ್ದು ತಂಡ ಒಮ್ಮೆ ಮಾತ್ರ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಉಳಿದಂತೆ ತಂಡದ ಪ್ರದರ್ಶನ ಹೀಗಿದೆ.

2007ರ ಟಿ20 ವಿಶ್ವಕಪ್‌ನ ಚೊಚ್ಚಲ ಆವೃತ್ತಿಯಲ್ಲೇ ಟೀಂ ಇಂಡಿಯಾ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಮಣಿಸಿ ಪ್ರಶಸ್ತಿ ಜಯಿಸಿತ್ತು.

2009ರಲ್ಲಿ ನಡೆದ ಎರಡನೇ ಆವೃತ್ತಿಯ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಸೂಪರ್ 8 ಹಂತದಿಂದಲೇ ಹೊರಬಿದ್ದಿತ್ತು.

2010ರಲ್ಲಿ ನಡೆದ ಮೂರನೇ ಆವೃತ್ತಿಯ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಮತ್ತೊಮ್ಮೆ ಸೂಪರ್ 8 ಹಂತದಿಂದ ಹೊರಬಿದ್ದಿತ್ತು.

2012ರಲ್ಲಿಯೂ ಟೀಂ ಇಂಡಿಯಾ ಸತತ ಮೂರನೇ ಬಾರಿಗೆ ಸೂಪರ್ 8 ಹಂತದಿಂದ ಹೊರಬಿದ್ದಿತ್ತು.

2014ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ ಸೋತಿತ್ತು.

2016 ರ ಟಿ 20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಸೆಮಿಫೈನಲ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸೋಲನ್ನು ಎದುರಿಸಬೇಕಾಯಿತು.

2021ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಗ್ರೂಪ್ ಹಂತದಲ್ಲೇ ಹೊರಗುಳಿದಿತ್ತು.

ಇನ್ನು 2022 ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ 10 ವಿಕೆಟ್​ಗಳ ಹೀನಾಯ ಸೋಲನ್ನು ಎದುರಿಸಬೇಕಾಯಿತು.