31-05-2024

T20 World Cup: ಕಳೆದ 8 ಆವೃತ್ತಿಗಳಲ್ಲಿ ಟೀಂ ಇಂಡಿಯಾದ ಪ್ರದರ್ಶನ ಹೇಗಿತ್ತು?

Author: ಪೃಥ್ವಿ ಶಂಕರ

ಇಲ್ಲಿಯವರೆಗೆ 8 ಟಿ20 ವಿಶ್ವಕಪ್‌ ಆವೃತ್ತಿಗಳು ನಡೆದಿವೆ. ಇದರಲ್ಲಿ ಟೀಂ ಇಂಡಿಯಾ 2007ರಲ್ಲಿ ಮೊದಲ ಹಾಗೂ ಕೊನೆಯ ಬಾರಿಗೆ ಟಿ20 ವಿಶ್ವಕಪ್ ಗೆದ್ದಿತ್ತು. ಆ ನಂತರ ತಂಡದ ಪ್ರದರ್ಶನ ಹೇಗಿತ್ತು ಎಂಬುದನ್ನು ನೋಡುವುದಾದರೆ..

ಚೊಚ್ಚಲ ಟಿ20 ವಿಶ್ವಕಪ್ ಆವೃತ್ತಿಯಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಯುವ ಭಾರತ ತಂಡ ಚೊಚ್ಚಲ ಋತುವಿನಲ್ಲೇ ಪ್ರಶಸ್ತಿಯನ್ನು ವಶಪಡಿಸಿಕೊಂಡಿತ್ತು.

2009 ರಲ್ಲಿ ಭಾರತ ತಂಡ ಸೂಪರ್-8 ಹಂತದಲ್ಲೇ ತನ್ನ ಪಯಣ ಮುಗಿಸಿತ್ತು. ಈ ಋತುವಿನಲ್ಲಿ ಪಾಕಿಸ್ತಾನ ಪ್ರಶಸ್ತಿ ಗೆದ್ದಿತ್ತು.

2010ರ ಟಿ20 ವಿಶ್ವಕಪ್‌ನಲ್ಲಿಯೂ ಟೀಂ ಇಂಡಿಯಾ ಸೂಪರ್-8ರವರೆಗೂ ಪ್ರಯಾಣಿಸಿತ್ತು. ಅಲ್ಲಿಂದ ಮತ್ತೊಮ್ಮೆ ಖಾಲಿ ಕೈಯಲ್ಲಿ ತವರಿಗೆ ವಾಪಸ್ಸಾಗಿತ್ತು.

2012ರ ಟಿ20 ವಿಶ್ವಕಪ್‌ನಲ್ಲೂ ಟೀಂ ಇಂಡಿಯಾ ಸೂಪರ್ 8 ಹಂತದಲ್ಲೇ ತನ್ನ ಪ್ರಯಾಣವನ್ನು ಅಂತ್ಯಗೊಳಿಸಿತ್ತು.

2014ರಲ್ಲಿ ತಂಡವು ಫೈನಲ್‌ಗೆ ಎಂಟ್ರಿಕೊಟ್ಟಿತ್ತು. ಆದರೆ, ನಿರ್ಣಾಯಕ ಪಂದ್ಯದಲ್ಲಿ ಶ್ರೀಲಂಕಾ 6 ವಿಕೆಟ್‌ಗಳಿಂದ ಭಾರತವನ್ನು ಸೋಲಿಸಿ ಪ್ರಶಸ್ತಿ ಎತ್ತಿಹಿಡಿದಿತ್ತು.

ಟಿ20 ವಿಶ್ವಕಪ್‌ನ ಆರನೇ ಸೀಸನ್‌ನಲ್ಲಿ ಟೀಂ ಇಂಡಿಯಾ ಸೆಮಿಫೈನಲ್‌ ಪ್ರವೇಶಿಸುವಲ್ಲಿ ಯಶಸ್ವಿಯಾಗಿತ್ತು. ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಭಾರತವನ್ನು 7 ವಿಕೆಟ್​ಗಳಿಂದ ಸೋಲಿಸಿ ವಿಶ್ವಕಪ್ ಗೆಲ್ಲುವ ಕನಸನ್ನು ಅಂತ್ಯಗೊಳಿಸಿತು.

2021 ರ ಟಿ 20 ವಿಶ್ವಕಪ್‌ನಲ್ಲಿ ಭಾರತ ತಂಡದ ಪ್ರದರ್ಶನವು ತೀರ ಕಳಪೆಯಾಗಿತ್ತು. ತಂಡಕ್ಕೆ ಸೆಮಿಫೈನಲ್‌ತಲುಪಲು ಸಾಧ್ಯವಾಗಲಿಲ್ಲ. ಈ ಋತುವಿನಲ್ಲಿ ಪಾಕಿಸ್ತಾನ 10 ವಿಕೆಟ್‌ಗಳಿಂದ ಭಾರತವನ್ನು ಸೋಲಿಸಿತ್ತು. ಟಿ20 ವಿಶ್ವಕಪ್ ಇತಿಹಾಸದಲ್ಲಿ ಪಾಕಿಸ್ತಾನ, ಭಾರತವನ್ನು ಸೋಲಿಸಿದ್ದು ಇದೇ ಮೊದಲು.

ಇದರ ನಂತರ, ಭಾರತ ತಂಡವು 2022 ರ ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್ ತಲುಪಿತ್ತು. ಆದರೆ ಎರಡನೇ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ಭಾರತವನ್ನು ಸೋಲಿಸಿ ಟ್ರೋಫಿ ರೇಸ್‌ನಿಂದ ಹೊರಹಾಕಿತ್ತು.