11-12-2023

ಐಪಿಎಲ್​ನಲ್ಲಿ ಅತಿ ಹೆಚ್ಚು ಫೈನಲ್ ಪಂದ್ಯಗಳನ್ನು ಸೋತ ತಂಡ ಯಾವುದು ಗೊತ್ತಾ?

Author: ಪೃಥ್ವಿ ಶಂಕರ

ಐಪಿಎಲ್‌ನಲ್ಲಿ ಅತಿ ಹೆಚ್ಚು ಪಂದ್ಯಗಳ ಸೋತ ದಾಖಲೆ ಚೆನ್ನೈ ಸೂಪರ್ ಕಿಂಗ್ಸ್ ಹೆಸರಿನಲ್ಲಿದೆ. ಈ ತಂಡ 2008, 2012, 2013, 2015, 2019 ರಲ್ಲಿ ಅಂದರೆ ಒಟ್ಟು ಐದು ಫೈನಲ್ ಪಂದ್ಯಗಳಲ್ಲಿ ಸೋತಿದೆ.

ಎರಡನೇ ಸ್ಥಾನದಲ್ಲಿರುವ ಆರ್​ಸಿಬಿ ತಂಡ 2009, 2011, 2016 ರಲ್ಲಿ ಅಂದರೆ ಮೂರು ಬಾರಿ ಫೈನಲ್ ಪಂದ್ಯಗಳಲ್ಲಿ ಸೋಲನುಭವಿಸಿದೆ.

2010ರ ಐಪಿಎಲ್‌ನ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪ್ರಶಸ್ತಿ ಸುತ್ತಿನಲ್ಲಿ ಮುಗ್ಗರಿಸಿತ್ತು.

2014ರ ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ಕೂಡ ಫೈನಲ್ ಪಂದ್ಯದಲ್ಲಿ ಸೋತಿತ್ತು.

ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ ತಂಡ 2017 ರ ಐಪಿಎಲ್‌ನ ಫೈನಲ್‌ ಪಂದ್ಯದಲ್ಲಿ ಸೋಲು ಕಂಡಿತ್ತು.

2018ರ  ಐಪಿಎಲ್‌ನ ಫೈನಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಸೋಲನುಭವಿಸಿತ್ತು.

2020ರ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪ್ರಶಸ್ತಿ ಸುತ್ತಿನಲ್ಲಿ ಎಡವಿತ್ತು.

2021 ರ ಐಪಿಎಲ್ ಫೈನಲ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಸೋತಿತ್ತು.

2022 ರ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಸೋತಿತ್ತು.

2023ರ ಫೈನಲ್ ಐಪಿಎಲ್ ಪಂದ್ಯದಲ್ಲಿ ಸೋತಿದ್ದ ಗುಜರಾತ್ ಟೈಟಾನ್ಸ್ ಸತತ 2ನೇ ಬಾರಿಗೆ ಚಾಂಪಿಯನ್ ಆಗುವ ಅವಕಾಶವನ್ನು ಕಳೆದುಕೊಂಡಿತ್ತು.