20-01-2024

ಟೆಸ್ಟ್‌ನಲ್ಲಿ ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಟಾಪ್ 10 ಆಟಗಾರರಿವರು

Author: ಪೃಥ್ವಿ ಶಂಕರ

ಟೆಸ್ಟ್‌ನಲ್ಲಿ ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರರ ಪೈಕಿ ಆಡಿರುವ 166 ಟೆಸ್ಟ್ ಪಂದ್ಯಗಳಲ್ಲಿ 23 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿರುವ ದಕ್ಷಿಣ ಆಫ್ರಿಕಾದ ಜಾಕ್ವೆಸ್ ಕಾಲಿಸ್ ಮೊದಲ ಸ್ಥಾನದಲ್ಲಿದ್ದಾರೆ.

ಎರಡನೇ ಸ್ಥಾನದಲ್ಲಿರುವ ಶ್ರೀಲಂಕಾದ ಶ್ರೇಷ್ಠ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ 133 ಟೆಸ್ಟ್ ಪಂದ್ಯಗಳಲ್ಲಿ 19 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ.

104 ಟೆಸ್ಟ್ ಪಂದ್ಯಗಳನ್ನಾಡಿದ್ದ ಪಾಕಿಸ್ತಾನದ ಮಾಜಿ ನಾಯಕ ವಾಸಿಂ ಅಕ್ರಮ್ 17 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಆಸ್ಟ್ರೇಲಿಯಾದ ಶೇನ್ ವಾರ್ನ್ 145 ಟೆಸ್ಟ್ ಪಂದ್ಯಗಳನ್ನು ಆಡಿ ತಮ್ಮ ವೃತ್ತಿಜೀವನದಲ್ಲಿ 17 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಶ್ರೀಲಂಕಾದ ಕುಮಾರ ಸಂಗಕ್ಕಾರ 134 ಟೆಸ್ಟ್ ಪಂದ್ಯಗಳನ್ನು ಆಡಿ 16 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ 168 ಟೆಸ್ಟ್ ಪಂದ್ಯಗಳನ್ನು ಆಡಿ 16 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ವೆಸ್ಟ್ ಇಂಡೀಸ್‌ನ ಕರ್ಟ್ಲಿ ಆಂಬ್ರೋಸ್ 98 ಟೆಸ್ಟ್ ಪಂದ್ಯಗಳಲ್ಲಿ 14 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ.

168 ಟೆಸ್ಟ್ ಪಂದ್ಯಗಳನ್ನು ಆಡಿದ್ದ ಆಸ್ಟ್ರೇಲಿಯಾದ ಸ್ಟೀವ್ ವಾ 14 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಭಾರತದ ಸಚಿನ್ ತೆಂಡೂಲ್ಕರ್ 200 ಟೆಸ್ಟ್ ಪಂದ್ಯಗಳನ್ನು ಆಡಿ 14 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ 107 ಟೆಸ್ಟ್ ಪಂದ್ಯಗಳನ್ನು ಆಡಿ 13 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.