27-06-2024

IND vs ENG: ಬಾಬರ್ ದಾಖಲೆ ಮುರಿಯುವ ತವಕದಲ್ಲಿ ಕೊಹ್ಲಿ

Author: ಪೃಥ್ವಿ ಶಂಕರ

ಇಂದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೇವಲ 22 ರನ್ ಬಾರಿಸಿದರೆ, ಬಾಬರ್ ಆಝಂ ದಾಖಲೆ ಮುರಿಯಲ್ಲಿದ್ದಾರೆ.

ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯ ಭಾರತ ಮತ್ತು ಇಂಗ್ಲೆಂಡ್ ನಡುವೆ ಗಯಾನಾದಲ್ಲಿ ನಡೆಯಲಿದೆ.

ಈ ಟೂರ್ನಿಯಲ್ಲಿ ಇದುವರೆಗೆ ಭಾರತದ ಪ್ರದರ್ಶನ ಅತ್ಯುತ್ತಮವಾಗಿದ್ದು, ತಂಡ ಅಜೇಯವಾಗಿ ಸಾಗುತ್ತಿದೆ.

ಆದರೆ, ವಿರಾಟ್ ಕೊಹ್ಲಿ ಅವರ ಬ್ಯಾಟ್ ಇಲ್ಲಿಯವರೆಗೂ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗದೆ ರನ್ ಗಳಿಸಲು ಪರದಾಡುತ್ತಿದೆ.

ಆದರೆ ಟಿ20ಯಲ್ಲಿ ಇಂಗ್ಲೆಂಡ್ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಆಗುವ ಅವಕಾಶ ಕೊಹ್ಲಿಗಿದೆ.

ಬಾಬರ್ ಆಝಂ ಇಂಗ್ಲೆಂಡ್ ವಿರುದ್ಧದ ಟಿ20ಯಲ್ಲಿ 660 ರನ್ ಬಾರಿಸಿ, ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಇಂದಿನ ಪಂದ್ಯದಲ್ಲಿ ಕೊಹ್ಲಿ 22 ರನ್ ಗಳಿಸುವಲ್ಲಿ ಯಶಸ್ವಿಯಾದರೆ ಈ ವಿಷಯದಲ್ಲಿ ಬಾಬರ್ ಅವರನ್ನು ಹಿಂದಿಕ್ಕಲ್ಲಿದ್ದಾರೆ.

ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದ ಕಡಿಮೆ ಸ್ವರೂಪದಲ್ಲಿ 639 ರನ್ ಬಾರಿಸಿದ್ದು, ಈ ತಂಡದ ವಿರುದ್ಧ ಹೆಚ್ಚು ರನ್ ಗಳಿಸಿದ ವಿಷಯದಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

NEXT: T20 World Cup: ಅತಿ ಹೆಚ್ಚು ಬಾರಿ ಫೈನಲ್ ಪಂದ್ಯದಲ್ಲಿ ಸೋತ ತಂಡಗಳಿವು