ಮುಂಬೈ ಇಂಡಿಯನ್ಸ್ ತಂಡದ ಮೊದಲ ನಾಯಕ ಸಚಿನ್ ತೆಂಡೂಲ್ಕರ್. 2008 ರಿಂದ 2011ರವರೆಗೆ 55 ಪಂದ್ಯಗಳಲ್ಲಿ ಸಚಿನ್ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ್ದರು.
2- ಶಾನ್ ಪೊಲ್ಲಾಕ್
ಸೌತ್ ಆಫ್ರಿಕಾ ತಂಡದ ಮಾಜಿ ನಾಯಕ ಶಾನ್ ಪೊಲ್ಲಾಕ್ 2008 ರಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 4 ಪಂದ್ಯಗಳಲ್ಲಿ ಮುನ್ನಡೆಸಿದ್ದರು.
3- ಹರ್ಭಜನ್ ಸಿಂಗ್
2008 ರಿಂದ 2012 ರವರೆಗೆ 30 ಪಂದ್ಯಗಳಲ್ಲಿ ಟರ್ಬನೇಟರ್ ಖ್ಯಾತಿಯ ಹರ್ಭಜನ್ ಸಿಂಗ್ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು.
4- ಡ್ವೇನ್ ಬ್ರಾವೊ
2010 ರಲ್ಲಿ ವೆಸ್ಟ್ ಇಂಡೀಸ್ ಕ್ರಿಕೆಟಿಗ ಡ್ವೇನ್ ಬ್ರಾವೊ ಮುಂಬೈ ಇಂಡಿಯನ್ಸ್ ತಂಡವನ್ನು 1 ಪಂದ್ಯದಲ್ಲಿ ಮುನ್ನಡೆಸಿದ್ದರು.
5- ರಿಕಿ ಪಾಂಟಿಂಗ್
2013 ರಲ್ಲಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ 6 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡದ ಸಾರಥ್ಯವಹಿಸಿಕೊಂಡಿದ್ದರು.
6- ಕೀರನ್ ಪೊಲಾರ್ಡ್
2014 ರಿಂದ 2021 ರವರೆಗೆ ಕೀರನ್ ಪೊಲಾರ್ಡ್ ಮುಂಬೈ ಇಂಡಿಯನ್ಸ್ ತಂಡವನ್ನು 9 ಪಂದ್ಯಗಳಲ್ಲಿ ಮುನ್ನಡೆಸಿದ್ದರು.
7- ಸೂರ್ಯಕುಮಾರ್ ಯಾದವ್
2023 ರಲ್ಲಿ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ಒಂದು ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು.
8- ರೋಹಿತ್ ಶರ್ಮಾ
2013 ರಿಂದ 2023 ರವರೆಗೆ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡವನ್ನು ಒಟ್ಟು 163 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ 6 ಬಾರಿ ಮುಂಬೈ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.
9- ಹಾರ್ದಿಕ್ ಪಾಂಡ್ಯ
ಮುಂಬೈ ಇಂಡಿಯನ್ಸ್ ತಂಡದ ಹೊಸ ನಾಯಕನಾಗಿ ಹಾರ್ದಿಕ್ ಪಾಂಡ್ಯಗೆ ಪಟ್ಟ ಕಟ್ಟಲಾಗಿದೆ. 2 ಸೀಸನ್ಗಳಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಪಾಂಡ್ಯ ಈ ಬಾರಿ ಮುಂಬೈ ಪಡೆಯನ್ನು ಮುನ್ನಡೆಸಲಿದ್ದಾರೆ.