ಟೀಂ ಇಂಡಿಯಾ ಕ್ರಿಕೆಟಿಗ ಅಜಿಂಕ್ಯ ರಹಾನೆ ದಂಪತಿಗಳಿಗೆ ಗಂಡು ಮಗು ಜನಿಸಿದೆ.

ರಹಾನೆ ಇನ್ಸ್ಟಾಗ್ರಾಮ್ನಲ್ಲಿ ಈ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ .

ಮೂರು ವರ್ಷಗಳ ಹಿಂದೆ ಅಕ್ಟೋಬರ್ 4 ರಂದು ಈ ದಂಪತಿಗಳಿಗೆ ಹೆಣ್ಣು ಮಗು ಜನಿಸಿತ್ತು.

ಅಜಿಂಕ್ಯ ರಹಾನೆ- ರಾಧಿಕಾ ಧೋಪಾವ್ಕರ್ ಸೆಪ್ಟೆಂಬರ್ 2014 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು.

ರಹಾನೆ ಪ್ರಸ್ತುತ ಟೀಮ್ ಇಂಡಿಯಾದಿಂದ ಹೊರಗಿದ್ದು, ಇತ್ತೀಚೆಗೆ ನಡೆದ ದುಲೀಪ್ ಟ್ರೋಫಿಯಲ್ಲಿ ಆಡಿದ್ದರು.