29-12-2023

ಮಂಗಳೂರು: ಗುಡ್ಡ ಜರಿದು ಮಣ್ಣಿನಡಿ ಸಿಲುಕಿದ ಕಾರ್ಮಿಕರು

Author: ಗಣಪತಿ ಶರ್ಮ

ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸೂರಿಕುಮೇರು ಬಳಿ ಘಟನೆ.

ಜೆಸಿಂತಾ ಮಾರ್ಟಿಸ್ ಎಂಬವರ ಮನೆಯ ಕಾಂಪೌಂಡ್​​ನ ಕಾಮಗಾರಿ ವೇಳೆ ಘಟನೆ.

ಕಾಮಗಾರಿ ಸಂದರ್ಭದಲ್ಲಿ ಮೇಲಿನ‌ಗುಡ್ಡ ಜರಿದು ಬಿದ್ದು ಅವಘಡ.

ರಾಜೇಶ್ ನಾಯ್ಕ್ ಬಾಯಿಲ, ಉಮೇಶ್ ನಾಯ್ಕ್ ಅಪಾಯದಿಂದ ಪಾರು.

ಈ ಕಾರ್ಮಿಕರು ಕಾಂಪೌಂಡ್ ನಿರ್ಮಾಣಕ್ಕೆ ಮಣ್ಣು ಅಗೆದು ಪಾಯ ಮಾಡುತ್ತಿದ್ದರು.

ಈ ವೇಳೆ ಗುಡ್ಡ ಜರಿದು ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ.

ಕೂಡಲೇ ರಕ್ಷಣೆ ಮಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ವಿಟ್ಲ ಪೊಲೀಸ್ ಇನ್ಸ್​ಪೆಕ್ಟರ್ ನಾಗರಾಜ್ ಹೆಚ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.