ಕರ್ನಾಟಕದಲ್ಲಿ ಪಕ್ಷಾಂತರ ಪರ್ವ; ಯಾರು ಎಲ್ಲಿಗೆ? ಇಲ್ಲಿದೆ ನೋಡಿ

ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಶಾಸಕ ಕೆ. ಶಿವಲಿಂಗೇಗೌಡ ಜೆಡಿಎಸ್​​ ತೊರೆದು ಕಾಂಗ್ರೆಸ್​ ಸೇರುವುದಾಗಿ ಘೋಷಿಸಿದ್ದಾರೆ.

ಜೆಡಿಎಸ್ ಶಾಸಕ ಎಸ್​ಆರ್ ಶ್ರೀನಿವಾಸ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.

ಕಾಂಗ್ರೆಸ್​ನಿಂದ ಬಿಜೆಪಿಗೆ ಪಕ್ಷಾಂತರವಾಗಿದ್ದ ಶಾಸಕ ಎನ್​ವೈ ಗೋಪಾಲಕೃಷ್ಣ ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ಸಚಿವ ವಿ ಸೋಮಣ್ಣ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ, ಬಿಜೆಪಿ ಇದನ್ನು ಅಲ್ಲಗಳೆದಿದೆ. ಇವರು ಹಿಂದೆ ಜೆಡಿಎಸ್, ಕಾಂಗ್ರೆಸ್​ನಲ್ಲಿದ್ದರು.

ಸಚಿವ ಕೆಸಿ ನಾರಾಯಣ ಗೌಡ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಇವರು ಹಿಂದೆ ಬಿಎಸ್​​ಪಿ, ಜೆಡಿಎಸ್​ನಲ್ಲಿದ್ದು ನಂತರ ಬಿಜೆಪಿ ಸೇರಿದ್ದರು.