09 January 2025
Author: Ganapathi Sharma
ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ಗುರುವಾರ ಧಾರವಾಡ ಬಂದ್ ಆಚರಿಸಲಾಯಿತು.
ದಲಿತ ಪರ ಸಂಘಟನೆಗಳ ಬಂದ್ಗೆ ಆಡಳಿತಾರೂಢ ಕಾಂಗ್ರೆಸ್ ಪಕ್ಷವೂ ಬೆಂಬಲ ಘೋಷಿಸಿದೆ.
ಪ್ರತಿಭಟನಾಕಾರರು ಟಯರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಧಾರವಾಡ ನಗರದಲ್ಲಿ ಪ್ರತಿಭಟನಾಕಾರರು ಬೈಕ್ ಜಾಥಾ ನಡೆಸಿದರು.
ಧಾರವಾಡ ನಗರದ ಹಲವೆಡೆ ಅಂಗಡಿ ಮುಂಗಟ್ಟುಗಳನ್ನು ಬಲವಂತದಿಂದ ಮುಚ್ಚಿಸಲಾಯಿತು.
ಜಿಲ್ಲಾ ನ್ಯಾಯಾಲಯಕ್ಕೆ ಆಗಮಿಸಿದ ಪ್ರತಿಭಟನಕಾರರು ಕೋರ್ಟ್ ಕಲಾಪ ಬಂದ್ ಮಾಡುವಂತೆ ಆಗ್ರಹಿಸಿದರು.
ಜ್ಯುಬಿಲಿ ವೃತ್ತದಲ್ಲಿ ದಲಿತ ಸಂಘಟನೆಗಳು, ವಿವಿಧ ಸಂಘಟನೆಳು ಧರಣಿ ನಡೆಸಿದವು. ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಭಾಗಿಯಾದರು.
Next: ‘ಬಿಗ್ ಬಾಸ್ ಕನ್ನಡ ಸೀಸನ್ 11’ ಕಪ್ ಗೆಲ್ಲುವ ಭರವಸೆಯಲ್ಲಿ ರಜತ್